Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಕಾರೇಕುರದಲ್ಲಿ ಯುವಕನ ಕೊಚ್ಚಿ ಕೊಲೆ

ಶ್ರೀರಂಗಪಟ್ಟಣ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಗ್ರಾಮದ ಯುವಕ ಯೋಗೇಶ್ (34) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯೋಗೇಶ್ ಹತ್ಯೆಯಾಗಿರಬಹುದೆಂದು ಶಂಕೆ ವ್ಯಕ್ತವಾಗಿದ್ದು, ಪರಿಚಿತರೆ ಕೊಲೆ ಮಾಡಿರಬಹುದು ಎನ್ನಲಾಗಿದೆ.

ಶ್ರೀರಂಗಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!