ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ನಡೆದು ತಮ್ಮ ಸ್ನೇಹಿತತನ್ನು ಚಾಕುವಿನಿಂದ ಮಾರಕವಾಗಿ ಇರಿದು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕೀಲಾರ ಗ್ರಾಮದ ಜಯಂತ್ ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಕೀರ್ತೀ ಎಂದು ವ್ಯಕ್ತಿ ಕೊಲೆ ಮಾಡಿದ್ದೇನೆನ್ನಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗೆಳೆಯರ ನಡುವಿನ ಜಗಳ ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಮಂಡ್ಯ ತಾಲ್ಲೂಕಿನ ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಜರುಗಿದೆ.