Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಫ್ಯಾಕ್ಟರಿ ಸರ್ಕಲ್ ಬಳಿ ಯುವಕನ ಭೀಕರ ಹತ್ಯೆ

ಮಂಡ್ಯ ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಯುವಕನನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಮದ್ದೂರು ತಾಲ್ಲೂಕಿನ ಕಡಿಲುವಾಗಿಲು ಗ್ರಾಮದ ಗುರು ವಿಲಾಸ್(35) ನನ್ನ ಹತ್ಯೆಯಾದ ವ್ಯಕ್ತಿ. ಬಾರ್ ನಲ್ಲಿ ಮದ್ಯ ಕುಡಿದ ನಂತರ ಜೊತೆಯಲ್ಲಿ ಇದ್ದವರ ನಡುವೆ ಜಗಳ ನಡೆದು, ಈ ಹತ್ಯೆ ಸಂಭವಿಸಿದೆ.

ಕಡಿಲುವಾಗಿಲು ಗ್ರಾಮದ ಗುರುಮೂರ್ತಿ – ಜಯಮ್ಮ ದಂಪತಿಗಳ ಪುತ್ರ ಗುರುವಿಲಾಸ್ ಟಾಟಾ ಎಸಿ ಚಾಲಕನಾಗಿದ್ದು, ಗೆಜ್ಜಲಗೆರೆಯ ಗಾರ್ಮೆಂಟ್ಸ್ ಗೆ ನೌಕರರನ್ನು ಕರೆದುಕೊಂಡು ಹೋಗುತ್ತಿದ್ದನು, ಈ ವೇಳೆ ಮಂಡ್ಯ ಸ್ವರ್ಣ ಸಂದ್ರದ ಮಾನಸರನ್ನು ಪ್ರೀತಿಸಿ ಕಳೆದ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದನು,ಇ ವರಿಗೆ ಹೆಣ್ಣು ಮಗು ಇತ್ತು.

ಮದುವೆ ನಂತರ ಬೆಂಗಳೂರಿನಲ್ಲಿ ಸ್ವಂತ ಕಾರು ಚಾಲನೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದು ಆದರೆ ಗಂಡ – ಹೆಂಡತಿ ನಡುವೆ ಹೊಂದಾಣಿಕೆ ಇರಲಿಲ್ಲ, ಪತ್ನಿ ನಡವಳಿಕೆ ಮೇಲೆ ಅನುಮಾನಪಟ್ಟಿದ್ದರಿಂದ ಆಗಾಗ್ಗೆ ಕಲಹ ನಡೆಯುತ್ತಿತ್ತು. ಪತ್ನಿ ಮಾನಸ ಗಂಡನನ್ನು ತೊರೆದು ತವರು ಮನೆ ಸೇರಿಕೊಂಡಿದ್ದಳು.ಗುರು ವಿಲಾಸ್ ಸಹ ಮಂಡ್ಯದ ಬಸವನಗುಡಿಯಲ್ಲಿದ್ದ ಅಕ್ಕನ ಮನೆಗೆ ಮರಳಿದ್ದನು.

ಗುರುವಾರ ಸಂಜೆ ಫ್ಯಾಕ್ಟರಿ ವೃತ್ತದಲ್ಲಿರುವ ಸಂತೃಪ್ತಿ ಫ್ಯಾಮಿಲಿ ರೆಸ್ಟೋರೆಂಟ್ ಪಕ್ಕದ ಸಿದ್ದಾರ್ಥ ಕೊಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಹೋಗಿದ್ದು ಜೊತೆಯಲ್ಲಿ ಈತನ ಪರಿಚಿತರು ಇದ್ದರು, ರಾತ್ರಿ 10 ರ ವೇಳೆಗೆ ಜೊತೆಯಲ್ಲಿ ಇದ್ದವರ ಜೊತೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ, ಅದು ಕೊಲೆಯಲ್ಲಿ ಅಂತ್ಯವಾಗಿದೆ.

ಮಂಡ್ಯದ ಪೂರ್ವ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ,ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!