Thursday, May 16, 2024

ಪ್ರಾಯೋಗಿಕ ಆವೃತ್ತಿ

ಪೋಕ್ಸೊ ಪ್ರಕರಣ| ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾಶ್ರೀ ಶರಣು

ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಮಧ್ಯಾಹ್ನ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದರು.

ಪೋಕ್ಸೊ ಪ್ರಕರಣದಡಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಆನಂತರ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶರಣರು ದಾವಣಗೆರೆಯಲ್ಲಿದ್ದರು.

ಸದರಿ ಜಾಮೀನು ಪ್ರಶ್ನಿಸಿ ಸಂತ್ರಸ್ತ ಬಾಲಕಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಗಳ ವಿರುದ್ಧ ಸಲ್ಲಿಕೆ ಆಗಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಒಂದು ವಾರದೊಳಗೆ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ಸೂಚಿಸಿತ್ತು.

2023 ನವೆಂಬರ್ 8 ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಏ.29 ಸೋಮವಾರ ಮಧ್ಯಾಹ್ನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಹಾಜರಾದರು.

ಹೈಕೋರ್ಟ್‌ 2023ರ ನ. 8ರಂದು ನೀಡಿದ್ದ ಷರತ್ತು ಬದ್ಧ ಜಾಮೀನು ಪ್ರಶ್ನಿಸಿ ಸಂತ್ರಸ್ತೆಯ ತಂದೆಯು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ವರ್ಷದೊಳಗೆ ಮುಗಿಸಲು ಗಡುವು ನೀಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!