ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ 2022-23 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಪಿ.ಎ, ಎಂ.ಪಿ.ಎ, ಸರ್ಟಿಫಿಕೇಟ್ ಕೋರ್ಸ್, ಡಿಪ್ಲೋಮಾ, ಪಿ.ಜಿ ಡಿಪ್ಲೋಮಾ ಹಾಗೂ ಡಿ.ಲಿಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಬಹುದು. ಆಸಕ್ತರು ಸ್ನಾತಕೋತ್ತರ, ಡಿಪ್ಲೋಮಾ, ಸರ್ಟಿಫಿಕೇಟ್, ಡಿ.ಲಿಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಾಹಕ ವ್ಯವಸ್ಥೆ) ವೆಬ್ಸೈಟ್ https://uucms.karnataka.gov.in ಮೂಲಕ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ musicuniversity.ac.in or [email protected].in ದೂ.ಸಂ:0821-2402141, 9880761877 ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ.ಟಿ.ಎಸ್ ದೇವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ