Thursday, November 19, 2026

ಪ್ರಾಯೋಗಿಕ ಆವೃತ್ತಿ

ರಾಜ್ಯ ಸರ್ಕಾರದ ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಅಲ್ಲದೇ ಮೇ.9ರವರೆಗೆ ಮಾರ್ಪಡಿಸಿರುವ ಮೀಸಲಾತಿಯನ್ನು ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್​​ನ ಈ ತಡೆಯಾಜ್ಞೆಯಿಂದ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ಮೀಸಲಾತಿ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಏಕೆಂದರೆ ಸರಿಯಾಗಿ ಒಂದು ತಿಂಗಳ ಹಿಂದೆ (ಮಾ.24) ರಂದು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿತು.

ಪ್ರಮುಖವಾಗಿ ಪ್ರಬಲ ಎರಡು ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ವಿಚಾರವಾಗಿ ಚರ್ಚೆ ನಡೆಸಿ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಸಮವಾಗಿ ಮೀಸಲಾತಿಯನನ್ಉ ಹಂಚಲಾಗಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ