Saturday, November 21, 2026

ಪ್ರಾಯೋಗಿಕ ಆವೃತ್ತಿ

ಹಿರಿಯ ವಿದ್ವಾಂಸ ಪ್ರೊ.ಮುಝಾಫರ್ ಅಸ್ಸಾದಿ ನಿಧನ

ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರು ನಿಧನರಾಗಿದ್ದಾರೆ.

ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ.

ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಪ್ರೊ.ಅಸ್ಸಾದಿ ಪ್ರಸಿದ್ದರಾಗಿದ್ದರು.

ಅವರು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಗಳು (ಹಂಗಾಮಿ),ರಾಯಚೂರು ವಿವಿಯ ಮಾಜಿ ವಿಶೇಷಾಧಿಕಾರಿಗಳು,ರಾಜಕೀಯ ತಜ್ಞರು, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಹಿರಿಯ ಪ್ರಾಧ್ಯಾಪಕರಾಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ