Wednesday, September 11, 2024

ಪ್ರಾಯೋಗಿಕ ಆವೃತ್ತಿ

ನನ್ನ ಗೆಲುವು ವಿಧಾನಸಭಾ ಚುನಾವಣೆಗೆ ದಿಕ್ಸೂಚಿ

ನನ್ನ ಗೆಲುವು 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ನೂತನ ವಿಧಾನಪರಿಷತ್ ಸದಸ್ಯ ಮಧು ಜಿ ಮಾದೇಗೌಡ ತಿಳಿಸಿದರು

ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಸದಸ್ಯ ಎಸ್. ಗುರುಚರಣ್ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಪದವೀಧರರಿಗೆ,ಕಾಂಗ್ರೆಸ್ ಕಾರ್ಯಕರ್ತರಿಗೆ,ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ, ಸಿಬ್ಬಂದಿಗೆ,ನಾಲ್ಕು ಜಿಲ್ಲೆಗಳ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನನ್ನ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ಮೆಟ್ಟಿಲಾಗಿದೆ. ಪ್ರತಿ ಗ್ರಾಮದಲ್ಲೂ ಹಳೆಯ ಕಾರ್ಯಕರ್ತರ ಜೊತೆ ಹೊಸ ಕಾರ್ಯಕರ್ತರನ್ನು ಗುರುತಿಸಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ನಾವೆಲ್ಲರೂ ಸಜ್ಜಾಗಬೇಕು. ಗುರುಚರಣ್ ಅವರನ್ನು ಕೂಡ ನಾವು ಗೆಲ್ಲಿಸಬೇಕು. ಅವರ ಗೆಲುವಿಗೆ ಹಗಲು-ರಾತ್ರಿ ನಾನು ಶ್ರಮಿಸುತ್ತೇನೆ ಎಂದರು.

ನಮ್ಮ ಪಕ್ಷ ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಪಕ್ಷದ ಸಂಘಟನೆ ಹಾಗೂ ನಮ್ಮೆಲ್ಲರಿಗೂ ಸಹಕಾರ ನೀಡುವುದರ ಮೂಲಕ ನನ್ನ ಗೆಲುವಿಗೆ ಕಾರಣಕರ್ತರಾಗಿದ್ದಾರೆ ಎಂದು ಪ್ರಶಂಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಗುರುಚರಣ್ ಅವರ ಗೆಲುವಿಗೆ ಕೆಲಸ ಮಾಡಲು ತಿಳಿಸಿದ್ದಾರೆ.ಅವರ ಗೆಲುವಿಗೆ ಈಗಿನಿಂದಲೇ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಸಜ್ಜಾಗಬೇಕು.ನಮಗೆ ಜಿಲ್ಲೆಯಲ್ಲಿ ಪೂರಕ ವಾತಾವರಣವಿದ್ದು,ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಸದಸ್ಯ ಗುರುಚರಣ್ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ನನ್ನ ಗೆಲುವಿಗೆ ಯಾವ ರೀತಿ ಕಾರ್ಯತಂತ್ರ ರೂಪಿಸಬೇಕು ಎಂಬುವುದರ ಬಗ್ಗೆ ಈಗಾಗಲೇ ಮಧು ಜಿ. ಮಾದೇಗೌಡರು, ಮುಖಂಡರು, ವರಿಷ್ಠರ ಜತೆ ಮಾತುಕತೆ ನಡೆಸಿದ್ದೇನೆ.ಇದಕ್ಕೆ ಪೂರಕವಾಗಿ ಎಲ್ಲಾ ಕಾರ್ಯಕರ್ತರು ನಾವೇ ಗುರುಚರಣ್ ಎಂದು ಭಾವಿಸಿ ಹಗಲಿರುಳು ಶ್ರಮಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಮದ್ದೂರಿನಲ್ಲಿ ಗೆಲುವು ಶತಸಿದ್ಧ ಎಂದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜೋಗೀಗೌಡ, ಸಂದರ್ಶ ಅಭಿಮಾನಿಗಳು ಸೇರಿ ನೂತನ ವಿಧಾನಪರಿಷತ್ ಸದಸ್ಯ ಮಧು ಜಿ. ಮಾದೇಗೌಡರಿಗೆ ಅಭೂತಪೂರ್ವವಾದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಜ್ಜಹಳ್ಳಿ ರಾಮಕೃಷ್ಣ, ಕೆ.ಟಿ.ರಾಜಣ್ಣ, ಶಂಕರಲಿಂಗಯ್ಯ, ಗೋಪಿ, ಪುರಸಭಾ ಮಾಜಿ ಅಧ್ಯಕ್ಷ ಅಮರ್ ಬಾಬು, ಮಾಜಿ ಸದಸ್ಯ ಡಾಬ ಮಹೇಶ್, ತಾ. ಪಂ.ಸದಸ್ಯ ಚೆಲುವರಾಜ್,ನಾಗೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಮಮತಾ ಶಂಕರಗೌಡ. ಕಾರ್ಮಿಕ ವಿಭಾಗದ ಅಧ್ಯಕ್ಷ ಸತೀಶ್, ಜಿ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮುಖಂಡರಾದ ಅರುಣ್, ಸಿದ್ದು, ಪ್ರಕಾಶ್, ಜಯರಾಮು,ಆರ್.ಸಿ. ಮಹೇಶ, ಶಶಿ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!