-
ಶ್ರೀ ಬಿಸಿಲುಮಾರಮ್ಮ ದೇವಿಯ ಹಬ್ಬದ ಪ್ರಯುಕ್ತ ಮಾರಿಗುಡಿ ಗೆಳೆಯರ ಬಳಗದ ವತಿಯಿಂದ
-
ಸರ್.ಎಂ.ವಿ.ಕಪ್ -2022
ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಶ್ರೀಬಿಸಿಲು ಮಾರಮ್ಮ ದೇವಿಯ ಹಬ್ಬದ ಪ್ರಯುಕ್ತ ಮೇ 16 ಮತ್ತು 17ರಂದು ಮೈಸೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಾರಿಗುಡಿ ಗೆಳೆಯರ ಬಳಗದ ಅಧ್ಯಕ್ಷ ಎಚ್.ಎಸ್.ಶ್ರೀಕಾಂತ್ ತಿಳಿಸಿದರು.
ಕಬಡ್ಡಿ ಪಂದ್ಯಾವಳಿಗಾಗಿ ಹೊಸಹಳ್ಳಿಯ ಶ್ರೀರಾಮಮಂದಿರ ಪಕ್ಕದ ಜಾಗದಲ್ಲಿ ವಿಶೇಷವಾಗಿ ಕೆಮ್ಮಣ್ಣಿನ ಅಂಕಣ ಸಿದ್ಧಪಡಿಸಲಾಗಿದೆ. 3ರಿಂದ 5 ಸಾವಿರ ಜನರು ಕುಳಿತು ಕಬಡ್ಡಿ ವೀಕ್ಷಿಸಲು ಅನುಕೂಲವಾಗುವಂತೆ ಪ್ರೇಕ್ಷಕರ ಗ್ಯಾಲರಿಯನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಟೂರ್ನಿಯಲ್ಲಿ ಮೈಸೂರು ವಿಭಾಗ ವ್ಯಾಪ್ತಿಯ ಜಿಲ್ಲೆಗಳಿಂದ 50-60 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಗಳಿಗೆ 50000ರೂ.(ಪ್ರಥಮ), 30000ರೂ.(ದ್ವಿ) ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. 3 ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೂ ತಲಾ 10,000ರೂ. ನಗದು ಬಹುಮಾನ, ಉತ್ತಮ ದಾಳಿಗಾರ, ಹಿಡಿತಗಾರ ಮತ್ತು ಸರ್ವೋತ್ತಮ ಆಟಗಾರರಿಗೆ ವಿಶೇಷ ಬಹುಮಾನ ನೀಡಲಾಗುತ್ತದೆ ಎಂದರು.
ಮೇ 16ರಂದು ಸಂಜೆ 6ಕ್ಕೆ ಕ್ರೀಡಾ ಹಾಗೂ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಅವರು ಟೂರ್ನಿಗೆ ಚಾಲನೆ ನೀಡುವರು. ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಶ್ರೀನಿವಾಸ್, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಜನತಾ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಹಾಪ್‌ಕಾಮ್ಸ್ ನಿರ್ದೇಶಕ ಹೊಸಹಳ್ಳಿ ನಾಗೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಜೆ.ಅಶೋಕ್ ಜಯರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಯುವ ಮುಖಂಡ ಎಸ್.ಸಚ್ಚಿದಾನಂದ ಇಂಡುವಾಳು, ಜೆಡಿಎಸ್ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡ ಭಾಗವಹಿಸುವರು ಎಂದರು.
ಮೇ 17ರಂದು ರಾತ್ರಿ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಕಾಂಗ್ರೆಸ್ ಮುಖಂಡ ಡಾ.ಎಚ್.ಕೃಷ್ಣ, ಕಾಂಗ್ರೆಸ್ ಮುಖಂಡ ಪಿ.ರವಿಕುಮಾರ್ ಗಣಿಗ ಭಾಗವಹಿಸುವರು. ಇದೇ ವೇಳೆ ಹಿರಿಯ ಕಬಡ್ಡಿ ಆಟಗಾರರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು. ಗೋಷ್ಠಿಯಲ್ಲಿ ಬಳಗದ ಉಪಾಧ್ಯಕ್ಷ ಬೋರೇಗೌಡ, ಖಜಾಂಚಿ ಕೆ.ಎಸ್.ವಿನಯ್‌ಪ್ರಸಾದ್, ಕಾರ‌್ಯದರ್ಶಿ ವಿಜಯಕುಮಾರ್, ಸದಸ್ಯ ಬಿ.ಉಮೇಶ್, ಪ್ರಕಾಶ್ ಹಾಜರಿದ್ದರು.