Friday, September 20, 2024

ಪ್ರಾಯೋಗಿಕ ಆವೃತ್ತಿ

ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಪ್ರತೀಕ : ರಾಷ್ಟ್ರಪತಿ


  • ಕನ್ನಡದಲ್ಲೇ ಮಾತು ಪ್ರಾರಂಭಿಸಿದ ರಾಷ್ಟ್ರಪತಿ ದ್ರೌಪದಿ ಮರ್ಮು

  • ರಾಜ್ಯಪಾಲ ತಾವರಚಂದ್ ಗೆಹ್ಲೋಟ್-ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ವಿಶ್ವ ವಿಖ್ಯಾತ, ಪ್ರಸಿದ್ಧ 10 ದಿನಗಳ ಮೈಸೂರು ದಸರಾ ಆಚರಣೆಗಳು ಈ ಅರಮನೆ ನಗರದಲ್ಲಿ ಸೋಮವಾರ ಧಾರ್ಮಿಕ ಮತ್ತು ಸಾಂಪ್ರದಾಯಿಕ ಉತ್ಸಾಹದೊಂದಿಗೆ ಪ್ರಾರಂಭವಾಯಿತು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದರು.

ನಂತರ ಕನ್ನಡದಲ್ಲೆ ಮಾತು ಪ್ರಾರಂಭಿಸಿದ ಅವರು, ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ಹೃದಯ ಪೂರ್ವಕ ನಮಸ್ಕಾರಗಳು, ಚಾಂಮುಂಡೇಶ್ವರಿಗೆ ನನ್ನ ಹೃದಯ ಪೂರ್ವಕ ನಮಸ್ಕಾರಗಳು ಎಂದು ನುಡಿದರು, ನಂತರ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು.

ಚಾಂಮುಂಡೇಶ್ವರಿ ತಾಯಿಯ ಆರ್ಶೀವಾದ ಎಲ್ಲರ ಮೇಲಿರಲಿ, ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಪ್ರತೀಕ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚನ್ನಮ್ಮ ಅವರ ಸಾಧನೆ ಅವಿಸ್ಮರಣೀಯ ಎಂದು ಬಣ್ಣಿಸಿದರು.

ಮೈಸೂರು ದಸರಾ “ನಾಡ ಹಬ್ಬ” ವು ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುತ್ತವೆ, ಜೊತೆಗೆ ರಾಜಮನೆತನದ ಆಡಂಬರ ಮತ್ತು ವೈಭವವನ್ನು ನೆನಪಿಸುತ್ತವೆ, ಕಳೆದ ಎರಡು ವರ್ಷಗಳಿಂದ ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಯಿತು.

ಮೈಸೂರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ಮೈಸೂರು ರಾಜವಂಶಸ್ಥರ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪತಿಗಳು ವಾದ್ಯ ಸ್ತೋತ್ರ ಪಠಣಗಳ ಮಧ್ಯೆ ಉತ್ಸವವನ್ನು ಉದ್ಘಾಟಿಸಿದರು.

ಮುರ್ಮು ಮೈಸೂರು ದಸರಾದಲ್ಲಿ ಭಾಗವಹಿಸಿದ ಮೊದಲ ರಾಷ್ಟ್ರಪತಿ. ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಸಚಿವ ಸಂಪುಟದ ಹಲವಾರು ಸಚಿವರು ಅವರೊಂದಿಗೆ ಇದ್ದರು.

10-ದಿನಗಳ ಈ ಆಚರಣೆ ಪ್ರತಿ ವರ್ಷದಂತೆ, ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಜಾನಪದ ಕಲಾ ಪ್ರಕಾರಗಳೊಂದಿಗೆ ಪ್ರದರ್ಶನ ಮಾಡಲಿದೆ, ಈ ಉತ್ಸವವು ಅಪಾರ ಜನರು ಮತ್ತು ಪ್ರವಾಸಿಗರನ್ನು ಆಕರ್ಷಿಸಲಿದೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!