ಮೈಸೂರು ಜಿಲ್ಲೆಯ ಟಿ.ನರಸೀಪುರ ಸಮೀಪದ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರ ಪಾರಂ ಹೌಸ್ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ತಡರಾತ್ರಿ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.
ಫೌರಂ ಹೌಸ್ ನಲ್ಲಿ ಅಕ್ರಮವಾಗಿ ಸಾಕಲಾಗಿದ್ದವು ಎನ್ನಲಾದ ಕೆಲವು ಪಕ್ಷಿಗಳು ಹಾಗೂ ಪ್ರಾಣಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 4 ಬಾರ್ ಹೆಡೆಡ್ ಗೂಸ್ ಪಕ್ಷಿಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.




