Friday, November 20, 2026

ಪ್ರಾಯೋಗಿಕ ಆವೃತ್ತಿ

ಮೈಷುಗರ್ | ಎಥನಾಲ್ ಘಟಕ ಸ್ಥಾಪನೆ ಪರಿಶೀಲನೆ ಹಂತದಲ್ಲಿದೆ ; ಸಚಿವ ಪಾಟೀಲ

ಮಂಡ್ಯ ದಿ ಮೈಸೂರು ಷುಗರ್ ಕಂಪೆನಿ ಲಿ., (ಮೈಷುಗರ್)ನಲ್ಲಿ ಎಥನಾಲ್ ಘಟಕವನ್ನು ಸ್ಥಾಪಿಸುವ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದ್ದು, ಈ ಕುರಿತು ಸೂಕ್ತ ತೀರ್ಮಾನಕ್ಕಾಗಿ ಸಚಿವ ಸಂಪುಟ ಸಭೆಗೆ ಮಂಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

nudikarnataka.com

2024-25ನೇ ಸಾಲಿನ ಆಯವ್ಯಯದಲ್ಲಿ ಮೈಷುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ Asset Monestisation ಮೂಲಕ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.

ಈ ಘೋಷಣೆಯ ಅನುಷ್ಟಾನದ ಭಾಗವಾಗಿ ಮೈಷುಗರ್ ಕಾರ್ಖಾನೆಯಲ್ಲಿ ಎಥನಾಲ್ ಘಟಕದ ಸ್ಥಾಪನೆ, ಹೊಸ ಮಿಲ್ ಬಾಯ್ಲರ್ ಘಟಕ ಅಳವಡಿಕೆ ಹಾಗೂ ಹಾಲಿ ಇರುವ ಸಕ್ಕರೆ ಉತ್ಪಾದನಾ ವಿಭಾಗವನ್ನು ಆಧುನೀಕರಣಗೊಳಿಸುವ ಪ್ರಸ್ತಾವನೆಯನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಈ ಕುರಿತು ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯವರು ಸಿದ್ಧಪಡಿಸಿರುವ ಪರಿಷ್ಕೃತ ವಿಸ್ತೃತಾ ಯೋಜನಾ ವರದಿಯನ್ನು ಮೈಷುಗರ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರು, ಸರ್ಕಾರಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಮೈಷುಗರ್ ಕಂಪೆನಿಯಲ್ಲಿ 80 ಕೆ.ಎಲ್.ಪಿ.ಡಿ. ಎಥನಾಲ್ ಘಟಕವನ್ನು (Ethanol Plant with Slops Fired Boiler on C Molasses Feedstock) ಸ್ಥಾಪಿಸುವ ಮತ್ತು 5,000 ದಿನವಹಿ ಕಬ್ಬು ಅರೆಯುವ ಸಾರ್ಮಥ್ಯದ (ಟಿ.ಸಿ.ಡಿ.) ಯಂತ್ರೋಪಕರಣಗಳ ಅಳವಡಿಕೆ ಕುರಿತ ಪ್ರಸ್ತಾನವೆಗೆ ಈಗಾಗಲೇ ಆರ್ಥಿಕ ಇಲಾಖೆ ಮತ್ತು ಯೋಜನಾ ಇಲಾಖೆಗಳ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸೂಕ್ತ ತೀರ್ಮಾನಕ್ಕಾಗಿ ಸಚಿವ ಸಂಪುಟ ಸಭೆಗೆ ಮಂಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ