ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ ಯಂತ್ರಗಳನ್ನು ಸರಿಪಡಿಸಿ ರೈತರಿಗೆ ತೊಂದರೆಯಾಗದಂತೆ ಕೆಲಸಗಳು ಆರಂಭವಾಗಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಖುದ್ದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಮಂಗಲ್ ದಾಸ್ ಉಪಸ್ಥಿತರಿದ್ದರು.




