ಮಂಡ್ಯನಗರದ ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ಜೂನ್ 7 ರಂದು ಬೆಳಗ್ಗೆ 9 ಗಂಟೆಗೆ ಮೈಷುಗರ್ ಪ್ರೌಢಶಾಲಾ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ.
ಸಮಾರಂಭದ ಉದ್ಘಾಟನೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿಗಳಾದ ಪ್ರೊ.ಎಂ. ಕೃಷ್ಣೇಗೌಡ ಕಾರ್ಯಕ್ರಮದಲ್ಲಿ ಆಶಯ ಭಾಷಣ ಮಾಡಲಿದ್ದು, ವಿಧಾನಪರಿಷತ್ ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಅವರು “ಅಮೃತಧಾರೆ” ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಮುಖ್ಯ ಶಿಕ್ಷಕರಾದ ಟಿ.ರಮೇಶ್ ಪ್ರಾಸ್ತಾವಿಕ ನುಡಿ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಕೆ.ಆರ್. ಪೇಟೆ ಶಾಸಕ ಹೆಚ್.ಟಿ.ಮಂಜು, ನಗರಸಭೆ ಅಧ್ಯಕ್ಷ ಪ್ರಕಾಶ್ (ನಾಗೇಶ್), ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಮಂಗಲ್‌ದಾಸ್, ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ, ನಗರಸಭೆ ಉಪಾಧ್ಯಕ್ಷ ಅರುಣ್ ಕುಮಾರ್ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯ ಮೂರ್ತಿ ಎ.ಜೆ. ಸದಾಶಿವ, ಸೀನಿಯರ್ ಸಿವಿಲ್ ಜಡ್ಜ್ ಹೆಚ್.ಕೆ. ಉಮೇಶ್, ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ, ಇ.ಡಿ. ಬಿ.ಪಿ.ಸಿ.ಎಲ್ ಪಿ.ಎಸ್. ರವಿ, ಕೆ.ಎ.ಎಸ್ ಸಿ. ರಾಜು, ಕೆ.ಎ.ಎಸ್. ಕೆ.ಎಂ.ನಾಗೇಶ್, ಪ್ರಸಿದ್ಧ ವೈದ್ಯರಾದ ಡಾ. ಎಂ.ಮಾದಯ್ಯ. ಮೈಷುಗರ್ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಎಂ.ಎಸ್. ಮನ್ನಾರ್ ಕೃಷ್ಣರಾವ್, ಮೈಷುಗರ್ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಚಿಕ್ಕಲಿಂಗಯ್ಯ, ಕೃಷಿ ವಿಜ್ಞಾನಿ ಪ್ರೊ. ಗುಬ್ಬಯ್ಯ, ಉದ್ಯಮಿಗಳಾದ ಸುರೇಶ್ ಬಾಬು ಅವರನ್ನು ಸನ್ಮಾನಿಸಲಾಗುವುದು. ಶಿವಲಿಂಗಯ್ಯ, ಬಿ.ಟಿ.ಜಯರಾಂ, ಸತ್ಯನಾರಾಯಣ ದೇವ್ ಎಸ್.ಸಿ. ಡಾ. ಕೆ.ಎಂ.ಶಿವಕುಮಾರ್ ಕಾಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಉಚಿತ ಆರೋಗ್ಯತಪಾಸಣೆ ಶಿಬಿರವನ್ನು ಹಾಗೂ ಮಧ್ಯಾಹ್ನ 3 ರಿಂದ 4ರವರೆಗೆ ಶೈಕ್ಷಣಿಕ ವಿಚಾರ ಗೋಷ್ಠಿಯನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಮಾರೋಪ ಭಾಷಣವನ್ನು ಮಾಡಲಿದ್ದು, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸ್ಕೃತಿ ಚಿಂತಕ ಶಂಕರ ದೇವನೂರು ಆಶಯ ಭಾಷಣ ಮಾಡಲಿ ದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕಪಿ, ರವಿಕುಮಾರ್ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮದ್ದೂರು ಶಾಸಕ ಕೆ.ಎಂ. ಉದಯ್, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಮೇಲುಕೋಟೆ ವಿಧಾನಸಭಾ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಎಂ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮಾಜಿ ಶಾಸಕಎಂ. ಶ್ರೀನಿವಾಸ್, ನಗರಸಭಾ ಸದಸ್ಯ ಪೂರ್ಣಚಂದ್ರ ಆಗಮಿಸಲಿದ್ದಾರೆ.




