Saturday, November 21, 2026

ಪ್ರಾಯೋಗಿಕ ಆವೃತ್ತಿ

ನೀರಿನ ಮಟ್ಟ ಕುಸಿತ| ಬೇಸಿಗೆ ಬೆಳೆ ಬೆಳೆಯದಿರಲು ಸಚಿವರ ಮನವಿ

ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿದ್ದು, ಅಣೆಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್’ಎಸ್ ನಲ್ಲಿ ಇಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣನ ಅವಕೃಪೆಯಿಂದ ಈ ಬಾರಿ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಅಣೆಕಟ್ಟೆಗಳು ಭರ್ತಿಯಾಗಿಲ್ಲ, ಆದರೂ ನದಿ ಪಾತ್ರದ ರೈತರ ಹಿತದೃಷ್ಠಿಯಿಂದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನವೆಂಬರ್ ಅಂತ್ಯದವರೆಗೂ ನೀರು ಹರಿಸಲಾಗಿದೆ ಎಂದು ವಿವರಿಸಿದರು.

ನದಿಪಾತ್ರದಲ್ಲಿನ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆ ರಕ್ಷಣೆಗೆ ನಿಯಮಿತವಾಗಿ ಸಂಕಷ್ಟ ಸಮಯದಲ್ಲೂ ನೀರು ಹರಿಸಲಾಗಿದ್ದು, ಮುಂದಿನ ಮುಂಗಾರು ಮಳೆವರೆಗೆ ಜನಜಾನುವಾರುಗಳಿಗೆ ಅಗತ್ಯ ಆಹಾರ ಮತ್ತು ಮೇವು ದಾಸ್ತಾನಿಗೆ ಮುಂದಾಗಿ ಸಹಕರಿಸಬೇಕೆಂದು ಕೋರಿದರು.

ಪ್ರಸ್ತುತ ಅಣೆಕಟ್ಟೆಯಲ್ಲಿ ಕುಡಿಯುವ ನೀರು ಮಾತ್ರ ಲಭ್ಯವಿದ್ದು, ಮುಂದಿನ ಜೂನ್ ವರೆಗೆ 14 ಟಿಎಂಸಿ ನೀರು ಕುಡಿಯಲು ಅಗತ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಣೆಕಟ್ಟೆ ವ್ಯಾಪ್ತಿಯ ರೈತರು ಯಾವುದೇ ರೀತಿಯ ಅಲ್ಪಾವಧಿ ಅಥವಾ ದೀರ್ಘಾವದಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದು, ನೀರಿನ ಒಳ ಹರಿವು ಆಧಾರದ ಮೇಲೆ ಮುಂದಿನ ದಿನಗಳಲ್ಲಿ ನಾಲೆಗಳಿಗೆ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗುವುದು, ಇದಕ್ಕೆ ರೈತರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ನೀರಾವರಿ ಸಲಹೆ ಸಮಿತಿ ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್, ಮುಖ್ಯ ಅಭಿಯಂತರ ಆರ್.ಎನ್.ವೆಂಕಟೇಶ್,  ಅಧೀಕ್ಷಕ ಅಭಿಯಂತರ ರಘುರಾಂ, ಕಾರ್ಯಪಾಲಕ ಅಭಿಯಂತರ ಜಯಂತ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ