Sunday, May 5, 2024

ಪ್ರಾಯೋಗಿಕ ಆವೃತ್ತಿ

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ ಜಿಲ್ಲಾ ಪ್ರವಾಸ

ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಜೂನ್ 3 ಹಾಗೂ 4 ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆದ್ದಾರಿ ನಿಡಘಟ್ಟ (ಗಡಿಭಾಗ)ಕ್ಕೆ ಆಗಮಿಸುವರು. ಮಧ್ಯಾಹ್ನ 1 ಗಂಟೆಗೆ ಮಂಡ್ಯದ ಸಿಲ್ವರ್ ಜುಬಿಲಿ ಪಾರ್ಕ್ ನಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮಂಡ್ಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಸಾರ್ವಜನಿಕರ ಭೇಟಿಯಾಗಲಿದ್ದಾರೆ. ಸಂಜೆ 5.30ಕ್ಕೆ ಶ್ರೀರಂಗಪಟ್ಟಣ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಮೈಸೂರು ಸುತ್ತೂರು ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ವಾಸ್ತವ್ಯ  ಹೂಡಲಿದ್ದಾರೆ.

ಜೂನ್ 4 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಬಂದಿಗೌಡ ಬಡಾವಣೆಯಲ್ಲಿರುವ ಬ್ರಾಹ್ಮಣರ ಸಮುದಾಯ ಭವನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!