Wednesday, June 12, 2024

ಪ್ರಾಯೋಗಿಕ ಆವೃತ್ತಿ

ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಿ- ಎನ್. ಯತೀಶ್

ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಸಲಹೆ ನೀಡಿದರು.

ಮಂಡ್ಯ ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕ್ರೀಡೆಯು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ, ಶಾಲಾ ದಿನಗಳಲ್ಲಿ ಒಂದಲ್ಲ ಒಂದು ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಚಟುವಟಿಕೆಯಿಂದ ಇರಬಹುದು. ಕ್ರೀಡೆಯು ಮನೋಲ್ಲಾಸ ಕೊಡುವ ಜತೆ ಉತ್ತಮ ಆರೋಗ್ಯವನ್ನು ನೀಡುತ್ತದೆ. ಹಾಗಾಗಿ ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡೆ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಜಯಕುಮಾರ್ ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!