ಮಹಿ ಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಕನ್ನಡ ಗೀತಗಾಯನ ಸ್ಪರ್ಧೆಯನ್ನು ಮಂಡ್ಯದ ಅಶೋಕನಗರದ ಜಿಲ್ಲಾ ಬಾಲಭವನದಲ್ಲಿ ನ.25 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.
ಆಸಕ್ತ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಪಿ.ಕೋಮಲ ಮೊ. 9036801065 ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಕಟಣೆ ತಿಳಿಸಿದ್ದಾರೆ.




