Sunday, May 19, 2024

ಪ್ರಾಯೋಗಿಕ ಆವೃತ್ತಿ

‘ನಾ ನಾಯಕಿ’ ಕಾರ್ಯಕ್ರಮಕ್ಕೆ ಪ್ರಿಯಾಂಕಗಾಂಧಿ : ಮಹಿಳಾ ಪರ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರಿನ ಅರಮನೆ ಆವರಣದಲ್ಲಿ ಜ.16ರ ಸೋಮವಾರ ನಡೆಯಲಿರುವ ‘ನಾ ನಾಯಕಿ’ ಎಂಬ ಮಹಿಳಾ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ ಆಗಮಿಸಲಿದ್ದು, ಅವರು ಮಹಿಳಾ ಪರವಾದ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಬರೀ ಹೆಣ್ಣು ಮಕ್ಕಳು, ಮಹಿಳಾ ನಾಯಕರು ಮುಂತಾದವರು ಸೇರಿ ನಡೆಸುತ್ತಿರುವ ಕಾರ್ಯಕ್ರಮವಾಗಿದೆ. ಪ್ರಿಯಾಂಕ ಗಾಂಧಿ ಅವರು ಈ ಕಾರ್ಯಕ್ರಮದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕೆಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ, ರಾಜಕೀಯ ಕ್ಷೇತ್ರ ಅಥವಾ ಇನ್ಯಾವುದೇ ಕ್ಷೇತ್ರವಾಗಿರಬಹುದು. ಆದರಲ್ಲಿ ಸಾಧನೆ ಮಾಡಿರುವಂತಹ ಮಹಿಳೆಯರನ್ನು ಸನ್ಮಾನಿಸುವ ಮತ್ತು ಇನ್ನು ಮುಂತಾದ ಅನೇಕ ಕಾರ್ಯಕ್ರಮಗಳು ಈ ಸಮಾರಂಭದಲ್ಲಿ ಆಯೋಜಿಸಲಾಗಿದೆ ಎಂದರು.

ಈಗಾಗಲೇ ನಾವು ಎಲ್ಲಾ ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ಮಾಡಿ ಮಹಿಳೆಯರನ್ನೇ ಆದರಲ್ಲೂ ನಾಯಕಿಯರನ್ನೇ ಅಂದರೆ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ, ನಗರಸಭೆ, ಮುಂತಾದವುಗಳಲ್ಲಿ ಗೆದ್ದಿರುವ ಹಾಗೂ ಸೋತಿರುವವರು ಮತ್ತು ಮಾಜಿ ಸದಸ್ಯರು ಮುಂತಾದ ಮಹಿಳೆಯರನ್ನು ಈ ಒಂದು ‘ನಾ ನಾಯಕಿ’ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ ಎಂದರು.

ಬೂತ್‌ ನಿಂದ 10 ಮಹಿಳೆಯರು

ಒಂದೊಂದು ಬೂತ್‌ ಮಟ್ಟದಿಂದ ಕನಿಷ್ಠ ಪಕ್ಷ 5 ರಿಂದ 10 ಮಹಿಳೆಯರು ಈ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಿದ್ದೇವೆ. ಅಲ್ಲಿಗೆ ಬಂದ ಮಹಿಳೆಯರು ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುವ ಅವಕಾಶಗಳಿವೆ. ಅಲ್ಲದೇ ಸಲಹಾ ಪೆಟ್ಟಿಗೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಬರೆದು ಹಾಕಬಹುದಾಗಿದೆ ಎಂದರು.

ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಲು ಮನವಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಬೇಕೆಂದು ಮನವಿಸಲ್ಲಿಸಲಾಗುವುದು, ಅಲ್ಲದೇ ಸ್ತ್ರೀ ಶಕ್ತಿ ಸಂಘಗಳ ಈಗ ನೀಡುತ್ತಿರುವ ಸಾಲ ಸೌಲಭ್ಯವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಹಾಗೂ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರು ಲೈಂಗಿಕ ದೌರ್ಜನ್ಯ ತಡೆಗೆ ಕಾನೂನುಗಳನ್ನು ರೂಪಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ನಗರಸಭಾ ಸದಸ್ಯೆ ಪೂರ್ಣಿಮಾ, ಮಹಿಳಾ ಕಾಂಗ್ರೆಸ್ ಮುಖಂಡರಾದ ವಿಜಯಲಕ್ಷ್ಮಿ ರಘುನಂದನ್, ಮಂಗಳಗೌಡ, ಶಕುಂತಲ ಮತ್ತು ಸುವರ್ಣಾವತಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!