ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ 2ನೇ ಹೋಬಳಿ ನಾಡಕಚೇರಿ ನೂತನ ಕಟ್ಟಡವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು.
ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು, ಖಾಸಗಿ ಕಟ್ಟಡದಲ್ಲಿದ್ದ ನಾಡಕಚೇರಿಗೆ ಗ್ರಾಪಂ ವತಿಯಿಂದ ಸ್ವಂತ ನಿವೇಶನ ದೊರಕಿದೆ. ನೂತನ ಕಟ್ಟಡದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ರೈತರಿಗೆ ಸೇವೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಬಳಿಕ ಹೊಳಲು ಗ್ರಾಮ ಪಂಚಾಯತಿ ಕಚೇರಿಗೆ ತೆರಳಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ಹಾಗೂ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಗ್ರಾಮ ಪಂಚಾಯತಿ ಅನುದಾನ, ಕರ ಸಂಗ್ರಹ ಹಾಗೂ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕ್ರಿಯಾಯೋಜನೆ ತಯಾರಿಸಿ ಅಭಿವೃದ್ಧಿ ಕೈಗೊಳ್ಳುವ ಕುರಿತು ಚರ್ಚಿಸಿದರು. ಗ್ರಾಪಂ ಕಚೇರಿಗೆ ಸೇವಾ ಮಾನ್ಯತೆಯ ಐಎಸ್’ಒ ಪ್ರಮಾಣಪತ್ರ ಪಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆ ಕುರಿತು ನಿರ್ದೇಶನ ನೀಡಿದರು.
ಈ ವೇಳೆ ಗ್ರಾಪಂ ಅಧ್ಯಕ್ಷ ಅಭಿನಂದನ್, ಉಪಾಧ್ಯಕ್ಷೆ ಪಲ್ಲವಿ, ಮಾಜಿ ಶಾಸಕ ಹೆಚ್.ಬಿ.ರಾಮು, ಜಿಪಂ ಮಾಜಿ ಸದಸ್ಯ ಹೆಚ್.ಎಲ್.ಶಿವಣ್ಣ, ತಹಶೀಲ್ದಾರ್ ನರಸಿಂಹಮೂರ್ತಿ, ಕಂದಾಯಾಧಿಕಾರಿಗಳಾದ ಜಗದೀಶ, ಜಯರಾಂ, ಗುಣಶೇಖರ್ ಮೊದಲಾದವರಿದ್ದರು.




