Friday, April 19, 2024

ಪ್ರಾಯೋಗಿಕ ಆವೃತ್ತಿ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ: ಎಸ್.ಅಶ್ವತಿ

ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ. ಕಾರ್ಯಕ್ರಮಕ್ಕೆ ಬೇಕಾದಂತಹ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು ಎಲ್ಲ ಇಲಾಖೆಯ ಅಧಿಕಾರಿಗಳು ಸಹಕರಿಸಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡರ ಜಯಂತಿ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಂದು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿAದ ಕಲಾಮಂದಿರದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳಿAದ ಹಾಗೂ ಕಳಸ ಹೊತ್ತ ಮಹಿಳೆಯರನ್ನು ಒಳಗೊಂಡAತೆ ಮೆರವಣಿಗೆಯನ್ನು ಮಾಡಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮವು ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ (ಕಲಾಮಂದಿರದಲ್ಲಿ) ಆಯೋಜಿಸಲಾಗಿದೆ. ಕೆಂಪೇಗೌಡರ ವಿಚಾರಧಾರೆಗಳನ್ನು ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಾಗುವುದು ಎಂದರು.

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಕೆಂಪೇಗೌಡರ ವಿಚಾರಧಾರೆ ಕುರಿತಂತೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡುವಂತೆ ತಿಳಿಸಿದರು.

ಪ್ರತಿ ವರ್ಷದಂತೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸುವಂತೆ ಸೂಚಿಸಿದರು. ಕಾರ್ಯಕ್ರಮಕ್ಕೆ ಶಾಲಾ ಮತ್ತು ಕಾಲೇಜುಗಳಿಂದ ಹೆಚ್ಚು ವಿದ್ಯಾರ್ಥಿಗಳನ್ನು ಸೇರಿಸಿ ಕೆಂಪೇಗೌಡರ ವಿಚಾರಗಳು ವಿದ್ಯಾರ್ಥಿಗಳಿಗೆ ತಿಳಿಯಲಿ ಎಂದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಪ್ರಭು, ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಬಿ.ರಂಗೇಗೌಡ. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಉದಯ ಕುಮಾರ್, ನಗರಸಭೆಯ ಆಯುಕ್ತರಾದ ಆರ್. ಮಂಜುನಾಥ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷರಾದ ಬಾನಸವಾಡಿ ನಾಗಣ್ಣ, ಜಿಲ್ಲಾಧ್ಯಕ್ಷರಾದ ಎಲ್.ಕೃಷ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!