ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸುನೀಲ್ ಕುಮಾರ್ (36) ಎಂಬ ಯುವಕನನ್ನು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಳ್ಳೂರಿನಿಂದ ಆರಣಿಗೆ ಹೋಗುವ ರಸ್ತೆಯಲ್ಲಿರುವ ಅರಳಿಮರದ ಬಳಿ ಸುನಿಲ್ ಕುಮಾರನ ಮೇಲೆ ಮುಗಿಬಿದ್ದ ದುಷ್ಕರ್ಮಿಗಳು ಮನಬಂದಂತೆ ಮಚ್ಚು ಲಾಂಗ್ ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹಣಕಾಸು ವ್ಯವಹಾರ ನಡೆಸುತ್ತಿದ್ದ ಸುನಿಲ್ ಕುಮಾರ್ ಎರಡು- ಮೂರು ಕುಟುಂಬದ ಜೊತೆ ಅನ್ಯೋನ್ಯವಾಗಿದ್ದ ಹಿನ್ನಲೆ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಸುಧಾಕರ್, ಬೆಳ್ಳೂರು ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದಾರೆ.