Saturday, November 21, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ತಟ್ಟೇಕೆರೆ ಸಿಂಗಮ್ಮ ದೇವಿ ದೇವಸ್ಥಾನದಲ್ಲಿ ಕಳ್ಳತನ

ನಾಗಮಂಗಲ ತಾಲೂಕಿನ ತಟ್ಟೇಕೆರೆ ಗ್ರಾಮದ ಗ್ರಾಮ ದೇವತೆ ಸಿಂಗಮ್ಮದೇವಿ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು , ಬಾಗಿಲ ಬೀಗ ತೆರೆದು ಒಳ ನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಅಂದಾಜು ಒಂದು ಲಕ್ಷ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಪೂಜೆಗೆ ತೆರಳಿದ ಅರ್ಚಕರಿಗೆ ಕಳವಾಗಿರುವ ವಿಚಾರ ಗೋಚರವಾಗಿದೆ. ಪ್ರಕರಣ ನಡೆದ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರ ಆಗ್ರಹ: ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಪ್ರಮುಖ ರಸ್ತೆಗಳು ಸೇರುವ ವೃತ್ತಗಳಿಗೆ ಪೊಲೀಸ್ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಬೇಕು ಹಾಗೂ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸಿ ಜನ ಜಾನುವಾರು ಆಸ್ತಿಪಾಸ್ತಿ ರಕ್ಷಣೆ ಮಾಡಬೇಕೆಂದು ಆಗ್ರಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ