Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ : ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ನಾಗಮಂಗಲದಲ್ಲಿ ಹಿಂದೂ ಅಪ್ರಾಪ್ತ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಸರ್ಕಾರಿ ಗೋಮಾಳವನ್ನು ಅಕ್ರಮವಾಗಿ ಕೆಲವು ಮುಸ್ಲಿಂರು ಕಬಳಿಸುತ್ತಿದ್ದಾರೆಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಾಗಮಂಗಲ ಪಟ್ಟಣದಲ್ಲಿ ಕೆಲವು ಮುಸಲ್ಮಾನರಿಂದ ಮುಗ್ಧ ಹಿಂದೂ ಅಪ್ರಾಪ್ತ ಹುಡುಗಿಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೇ ಹೆಚ್.ಎನ್.ಕಾವಲು, ದೇವಲಾಪುರ ಹೋಬಳಿಯಲ್ಲಿ ಬರುವ ಸರ್ಕಾರಿ ಗೋಮಾಳವನ್ನು ಅಕ್ರಮವಾಗಿ ಕಬಳಿಸಿ ದರ್ಗಾವನ್ನು ನಿರ್ಮಿಸಿ, ವಕ್ಫ್ ಬೋರ್ಡ್ ಹೆಸರಿಗೆ ಕಾನೂನು ಬಾಹಿರವಾಗಿ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ಈ ಅಕ್ರಮಗಳ ವಿರುದ್ಧ ಪೊಲೀಸರು ಹಾಗೂ ತಾಲೂಕು ಆಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಹಿಂಪ ಕಾರ್ಯದರ್ಶಿ ಮಂಜುನಾಥ್, ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ