Thursday, September 19, 2024

ಪ್ರಾಯೋಗಿಕ ಆವೃತ್ತಿ

ವಾಲ್ಮೀಕಿ ನಿಗಮದ ಹಗರಣ| ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 95 ಕೋಟಿ ರೂ. ಮೊತ್ತ ಅಕ್ರಮವಾಗಿ ವರ್ಗಾವಣೆ ನಡೆದಿದೆ ಎನ್ನಲಾದ ಹಗರಣದ ಆರೋಪಿಯಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯಲ್ಲಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-82) ಸೋಮವಾರ ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜು.23) ಕೋರ್ಟ್‌ಗೆ ಹಾಜರುಪಡಿಸುವಂತೆ ಆದೇಶಿಸಿದರು. ಅಂತೆಯೇ ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಾಗೇಂದ್ರ ಪರ ಹೈಕೋರ್ಟ್‌ನ ಹಿರಿಯ ವಕೀಲ ಎಂ. ಎಸ್. ಶ್ಯಾಮ್‌ ಸುಂದರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!