ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ನಡುವೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಆಯೋಗವನ್ನು ಸ್ಥಾಪಿಸುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದೀಗ ಆಯೋಗವನ್ನು ರಚಿಸಲಾಗಿದೆ.




