Wednesday, May 15, 2024

ಪ್ರಾಯೋಗಿಕ ಆವೃತ್ತಿ

ನಾಲ್ವಡಿ ಅವರ ಜೀವನ- ಸಾಧನೆ ವಿದ್ಯಾರ್ಥಿಗಳಿಗೆ ತಿಳಿಸಬೇಕು:ತಗ್ಗಹಳ್ಳಿ ವೆಂಕಟೇಶ್

ನಾಡು ಕಂಡ ಮಾದರಿ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೀವನ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಹಾಗೂ ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ ಎಂದು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನೀರಾವರಿ,ಶಿಕ್ಷಣ, ಕೈಗಾರಿಕೆ, ಆರೋಗ್ಯ, ಕೃಷಿ ಕ್ಷೇತ್ರ ಸೇರಿದಂತೆ ಹಲವು ಕ್ಚೇತ್ರಗಳಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ದೇವದಾಸಿ ಪದ್ಧತಿ, ಗೆಜ್ಜೆಪೂಜೆ ಮತ್ತಿತರ ಅನಿಷ್ಟ ಸಂಪ್ರದಾಯಗಳನ್ನು ಬಹಿಷ್ಕಾರ ಹಾಕಿ, ಮೀಸಲಾತಿ ತಂದಿದ್ದಾರೆ‌‌ ಎಂದರು.

ಮೈಷುಗರ್,ಕನ್ನಂಬಾಡಿ ಅಣೆಕಟ್ಟೆ ಕಟ್ಟುವ ಮೂಲಕ ಮಂಡ್ಯ ಜಿಲ್ಲೆಗೆ ಅನೇಕ‌ ಕೊಡುಗೆ ನೀಡಿರುವ ಅವರ ಜೀವನ ಮತ್ತು ಸಾಧನೆಯನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಸುವುದು ನಮ್ಮ ಟ್ರಸ್ಟ್ ಉದ್ದೇಶವಾಗಿದೆ ಎಂದರು.

ಈ ಹಿನ್ಮಲೆಯಲ್ಲಿ ನವೆಂಬರ್ 2 ರಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಶಾರದ ರಂಗ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ನೆನಪೋತ್ಸವ ಮಾಡುತ್ತಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಎಚ್. ಎನ್. ಗೋಪಾಲಕೃಷ್ಣ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಭಾರತಿ ಕಾಲೇಜಿನ ಮ.ರಾಮಕೃಷ್ಣ ಉಪನ್ಯಾಸ ನೀಡಲಿದ್ದಾರೆ. ಮಂಡ್ಯ ವಿವಿ ಕುಲಪತಿ ಪುಟ್ಟರಾಜು, ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಟ್ರಸ್ಟ್ ಉಪಾಧ್ಯಕ್ಷ ಜಗದೀಶ್,ಪ್ರಧಾನ ಕಾರ್ಯದರ್ಶಿ ಲಂಕೇಶ್ ಮಂಗಲ, ಸಂಚಾಲಕರಾದ ಮಂಜು ನವೀನ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!