Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜು.5ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ನಂಜಮ್ಮ ಮೋಟೇಗೌಡ ಚಾರಿಟಬಲ್ ಮತ್ತು ಎಜುಕೇಷನಲ್ ಟ್ರಸ್ಟ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 5 ರಂದು ಸಂಜೆ 4.30ಕ್ಕೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕೆ.ಟಿ.ಹನುಮಂತು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟ್ರಸ್ಟ್ ವತಿಯಿಂದ ಹಲವು ಪ್ರಶಸ್ತಿಗಳನ್ನು ನೀಡುತ್ತಿದ್ದು, ಈ ಬಾರಿಯ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದು, ಲೋಕೇಶ್ ಚಂದಗಾಲು ಅವರ `ನಾಲ್ವಡಿ ನಾಡು’ ಪುಸ್ತಕವನ್ನು ಬಿಡುಗಡೆ ಮಾಡುವರು. ಶಾಸಕ ಪಿ.ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ (ನಾಗೇಶ್) ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್‌ಗೌಡ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೆ.ಎಸ್.ರಾಜಣ್ಣ, ಮುಖ್ಯ ಅತಿಥಿಗಳಾಗ ಭಾಗವಹಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಗೌರವ ಉಪಸ್ಥಿತಿ ವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಲಂಕೇಶ್ ಮಂಗಲ, ಡೇವಿಡ್ ಪ್ರತಿಭಾಂಜಲಿ, ಪ್ರೊ.ರಮೇಶ್, ಎಸ್.ಎಂ.ಲೋಕೇಶ್, ಉದಯ್‌ಶಂಕರ್, ಕೃಷ್ಣಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ