Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣದಲ್ಲಿ ಶಾಸಕರಿಂದ ‘ನಮ್ಮ ಕ್ಲಿನಿಕ್’ ಉದ್ಘಾಟನೆ

ಶ್ರೀರಂಗಪಟ್ಟಣದ ಪುರಸಭಾ ವ್ಯಾಪ್ತಿಯ ಗಂಜಾಂನ ನಿಮಿಷಾಂಬ ದೇವಸ್ಥಾನ ಹತ್ತಿರ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಅನ್ನು ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸ್ಥಳೀಯವಾಗಿ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆಧುನಿಕ ತಂತ್ರಜ್ಞಾನವುಳ್ಳ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಹಾಗೆಯೇ ಸ್ಥಳೀಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂತಹ ಕೇಂದ್ರಗಳು ಸಹಕಾರಿಯಾಗಲಿವೆ ಆದ್ದರಿಂದ ಸಾರ್ವಜನಿಕರು ಸದರಿ ಕ್ಲಿನಿಕ್ ನ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕೆ ಮೋಹನ್ ಮಾತನಾಡಿ ಸದರಿ ನಮ್ಮ ಕ್ಲಿನಿಕ್ ನಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ,ನವಜಾತ ಶಿಶುಗಳ ಆರೈಕೆ ಮತ್ತು ಚಿಕಿತ್ಸೆ,ಮಕ್ಕಳ ಮತ್ತು ಹದಿಹರೆದವರ ಆರೋಗ್ಯದ ಕಾಳಜಿ, ಲಸಿಕೆ ಸೇವೆ,ಕುಟುಂಬ ಕಲ್ಯಾಣ ಕಾರ್ಯಕ್ರಮ,ಸೋಂಕುಗಳ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ ಸೇರಿದಂತೆ 12 ರೀತಿಯ ವೈದ್ಯಕೀಯ ಸೇವೆಗಳ ಜೊತೆ 14 ಬಗೆಯ ಲ್ಯಾಬ್ ಟೆಸ್ಟ್ ಗಳು, ಟೆಲಿ ಕನ್ಸಲ್ಟೇಶನ್ ಸೌಲಭ್ಯ ,ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ ಅಷ್ಟೇ ಅಲ್ಲ ತಾಲ್ಲೂಕು ಆಸ್ಪತ್ರೆಯ ಮೇಲಿರುವ ಒತ್ತಡವು ಕಡಿಮೆ ಆಗುತ್ತಿದೆ ಆದ್ದರಿಂದ ಸಾರ್ವಜನಿಕರು ಕ್ಲಿನಿಕ್ ನಲ್ಲಿ ಸಿಗುವ ಆರೋಗ್ಯ ಸೇವೆಗಳನ್ನು ಪಡೆಯಬೇಕೆಂದು ಸಲಹೆ ನೀಡಿದರು.

ಈ ವೇಳೆ ಪುರಸಭಾ ಅಧ್ಯಕ್ಷ ದಿನೇಶ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ ಕೆ ಪಿ ಅಶ್ವಥ್,ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ ಆಶಾಲತಾ ಎಂ ಎನ್,ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಗಣೇಶ್ ಪ್ರಸಾದ,ಪುರಸಭಾ ಸದಸ್ಯರಾದ ನಂದೀಶ್,ಕೃಷ್ಣಪ್ಪ, ದಯಾನಂದ,ನರಸಿಂಹ ಗೌಡ್ರು, ಮಂಗಳಮ್ಮ ,ನಿಂಗರಾಜು,ನಿರ್ಮಲ ವೇಣುಗೋಪಾಲ್,ನಂದೀಶ್ ಎಸ್ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೋಮ ಸುಂದರ್, ಅನಿಲ್ ಕುಮಾರ, ದೇವರಾಜು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮುಖಂಡರು, ಸಾರ್ವಜನಿಕರು,ಪುರಸಭಾ ಕಚೇರಿಯ ಅಧಿಕಾರಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ