Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿದೇಶಗಳಿಗೆ ನಂದಿನಿ ತುಪ್ಪ ರಫ್ತು ; ಸಿಎಂ ಸಿದ್ದರಾಮಯ್ಯ ಚಾಲನೆ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನವೆಂಬರ್ 25, ಮಂಗಳವಾರ ಕಾವೇರಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಇದೇ ವೇಳೆ ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ಕಾದು ನೋಡೋಣ, ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ  ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ರಾಹುಲ್ ಗಾಂಧಿ ಭೇಟಿ ಮಾಡುವಿರ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ  ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದು ಕೂಡ ಅವರು ತಿಳಿಸಿದರು.

ಕೃಪೆ : ನಾನು ಗೌರಿ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ