ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ನಂಜಪ್ಪ ಅವರು ತೀವ್ರ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ನಂಜಪ್ಪ ಅವರು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ,ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಳಿಯನನ್ನು ಅಗಲಿದ್ದಾರೆ. ಅಪಾರ ಬಂಧು-ಬಳಗ ಅಸಂಖ್ಯಾತ ಸ್ನೇಹಿತರನ್ನು ಹೊಂದಿದ್ದ ನಂಜಪ್ಪ ಅವರು ಮೈ ಷುಗರ್ ಕಂಪನಿಯಲ್ಲಿ ಸೇವೆ ಸಲ್ಲಿಸಿದ್ದರು.