Friday, September 20, 2024

ಪ್ರಾಯೋಗಿಕ ಆವೃತ್ತಿ

ಕನ್ನಡ ಭಾಷೆಯು ನಮ್ಮ ಸಂಸ್ಕೃತಿಯ ಶ್ರೀಮಂತ ಶಕ್ತಿಶಾಲಿ ಭಾಷೆ: ನರಸಿಂಹ ಪ್ರಸಾದ್

ಕನ್ನಡ ಭಾಷೆ ನೆಲ ಜಲ ಸಂಸ್ಕೃತಿಯ ಪ್ರತಿಬಿಂಬವಾಗಿ ಕನ್ನಡ ಭಾಷೆಯು ಶ್ರೀಮಂತ ಶಕ್ತಿಶಾಲಿಯಾಗಿ ಕನ್ನಡ ಭಾಷೆಯು ಬೆಳೆದಿದೆ ಎಂದು ಶಿಕ್ಷಕರಾದ ನರಸಿಂಹ ಪ್ರಸಾದ್ ತಿಳಿಸಿದರು.

ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯು ಕೇವಲ ಕನ್ನಡಿಗರಿಗೆಲ್ಲದೆ ಕನ್ನಡ ಭಾಷೆಯ ಶ್ರೀಮಂತಿಕೆ ಎಲ್ಲರಲ್ಲೂ ಮನ ಗೆದ್ದಿದ್ದು ಅಂತಹ ಈ ನೆಲದ ಒಡಲು ನಮ್ಮಗಳ ಸ್ವಾಭಿಮಾನದ ಸಂಕೇತವಾಗಿ ಕರ್ನಾಟಕದ ಕನ್ನಡ ಕೇವಲ ಕನ್ನಡವಾಗಿರದೆ ವಿಶ್ವದ ಪ್ರಭಾವ ಭಾಷೆಗಳಲ್ಲಿಯೂ ಕನ್ನಡ ಎಲ್ಲರಲ್ಲೂ ಭಾಷಾ ಸಂಸ್ಕೃತಿಯ ಪ್ರತಿಬಿಂಬವಾಗಿದೆ ಎಂದು ಮಾತನಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚಿನ ಜನರು ಬಳಸುವ ಶ್ರೀಮಂತ ಭಾಷೆಯಾಗಿರುವ ಕನ್ನಡವು ಶ್ರೀಸಾಮಾನ್ಯರ ಭಾಷೆಯಾಗಿದೆ. ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ಭಾಷೆಯಾಗಿದೆ. ಅದರಲ್ಲೂ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಕಲೆ ಪರಂಪರೆ ಕನ್ನಡ ಭಾಷಾಭಿಮಾನಕ್ಕೆ ಸಮೃದ್ಧ ನೆಲೆಯಾಗಿದೆ ಎಂದು ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್ ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಅತೀ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಕನ್ನಡಿಗರಾದ ನಾವು ಕನ್ನಡ ನೆಲ ಜಲ ಹಾಗೂ ಭಾಷೆಯ ಬಗ್ಗೆ ನಿರಭಿಮಾನಿಗಳಾಗದೆ, ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಕನ್ನಡದ ನೆಲದಲ್ಲಿ ವಾಸಿಸುವ ಅನ್ಯ ಭಾಷಿಕರಿಗೆ ಕನ್ನಡವನ್ನು ಕಲಿಸಿಕೊಡುವ ಕೆಲಸವನ್ನು ಕನ್ನಡಿಗರಾದ ನಾವು ಶ್ರದ್ಧಾ ಭಕ್ತಿಯಿಂದ ಮಾಡಬೇಕು ಎಂದರು.

ಕನ್ನಡದ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮನಾದ್ದರಿಂದ ಕನ್ನಡವು ಅನ್ನ ಕೊಡುವ ಭಾಷೆಯಾಗಬೇಕು. ಪೋಷಕರು ಆಂಗ್ಲ ಭಾಷಾ ವ್ಯಾಮೋಹವನ್ನು ಬದಿಗಿಟ್ಟು ನಮ್ಮ ಮಾತೃಭಾಷೆಯಾದ ಕನ್ನಡದಲ್ಲಿಯೇ ಶಿಕ್ಷಣವನ್ನು ಕೊಡಿಸಲು ಮುಂದಾಗಬೇಕು ಎಂದು ನಾಗಮಂಗಲ ವೃತ್ತ ಆರಕ್ಷಕ ನಿರೀಕ್ಷಕರಾದ ನಿರಂಜನ್ ಕರೆ ನೀಡಿದರು.

ಸಮಾರಂಭದ ಪ್ರಾಸ್ತಾವಿಕ ನುಡಿಯನ್ನು ರಾಜ್ಯ ಸಮಿತಿ ಸದಸ್ಯರಾದ ಸಿ.ಎನ್ ಮಂಜುನಾಥ್ ನೆರವೇರಿಸಿ ಕಾರ್ಯಕ್ರಮ ನಿರೂಪಣೆಯನ್ನು ದೇ.ರಾ ಜಗದೀಶ್ ನಿರೂಪಿಸಿದರು, ಸಂಘದ ಕಾರ್ಯದರ್ಶಿ ವಸಂತ್ ಕುಮಾರ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!