Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಾಧನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇನೆ : ಸಚಿವ ನಾರಾಯಣಗೌಡ

ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಮುಂದಿಟ್ಟು ಕೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಢ 150 ಸ್ಥಾನಗಳನ್ನು ಗೆಲ್ಲುವ ಗುರಿ
ಹೊಂದಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಾಲ್ಲೂಕು ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಬೂತ್ ವಿಜಯ ಸಂಕಲ್ಪ ಅಭಿಯಾನ ಸಂಬಂಧ ಸುದ್ದಿಗೋಷ್ಠಿಯಲ್ಲಿ ಯಲ್ಲಿ ಮಾತನಾಡಿದ ಅವರು, ತಾವು ಶಾಸಕರಾಗಿ ರಾಜ್ಯದ ಸಚಿವರಾಗಿ ಅನುಷ್ಠಾನಗೊಳಿಸಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುವ ಮೂಲಕ ಮತ್ತೊಮ್ಮೆ ಕೃಷ್ಣರಾಜಪೇಟೆ ಕ್ಷೇತ್ರದಿಂದ ಸತತ ನಾಲ್ಕನೇ ಭಾರಿಗೆ ಗೆದ್ದು ಇತಿಹಾಸ ನಿರ್ಮಿಸುವುದಾಗಿ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕಾಂಗ್ರೆಸ್ ಪಕ್ಷವನ್ನು ಸೇರಿ ಕಾಂಗ್ರೆಸ್ ನಿಂದ ಮುಂಬರುವ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುತ್ತೇನೆ ಎಂಬ ವದಂತಿಯನ್ನು ಕಾಂಗ್ರೆಸ್ ಮುಖಂಡರೇ ಹಬ್ಬಿಸುತ್ತಿದ್ದಾರೆ. ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ನನ್ನ ಅಳಿವು ಉಳಿವು ಬಿಜೆಪಿ ಪಕ್ಷದಲ್ಲಿ ಮಾತ್ರ
ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾರಾಯಣಗೌಡ ಅವರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ
1800 ಕೋಟಿ ರೂಗಳಿಗೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದೇನೆ ಎಂದರು.

ಸ್ನೇಹ ವಿಶ್ವಾಸವೇ ಬೇರೆ ರಾಜಕಾರಣವೇ ಬೇರೆ ನಾನು ಹಿಂದೆ ಜೆಡಿಎಸ್ ಪಕ್ಷದಿಂದ ಶಾಸಕನಾಗಿದ್ದಾಗ ಮಾನ್ಯ ಸಿದ್ಧರಾಮಯ್ಯನವರು ಹಾಗೂ ಡಿ.ಕೆ.ಶಿವಕುಮಾರ್ ಅಭಿವೃದ್ಧಿ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಅವರ ಸಹಾಯವನ್ನು ನಾನು ಸ್ಮರಿಸುತ್ತೇನೆ ಎಂದು ನಾರಾಯಣಗೌಡ ಹೇಳಿದರು.

ಗೋಷ್ಠಿಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಹಾಪ್ ಕಾಮ್ಸ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಹಿರಿಯ ಬಿಜೆಪಿ ಮುಖಂಡ ಪೂನಾ ಶಂಕರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಉಪಾಧ್ಯಕ್ಷ ಭಾರತೀಪುರ ಪುಟ್ಟಣ್ಣ, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!