ಸಣ್ಣ ಕರುಳಿನಲ್ಲಿರುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಸ್ಪೈರಲ್ ಎಂಟರೊಸ್ಕೋಪಿ ಸಹಕಾರಿಯಾಗಿದೆ ಎಂದು ಮೈಸೂರಿನ ನಾರಾಯಣ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ತಜ್ಞ ಡಾ.ಸತೀಶ್ ರಾವ್ ಎ.ಕೆ. ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 2 ಆಸ್ಪತ್ರೆಗಳಲ್ಲಿ ಮಾತ್ರ ಈ ಸೌಲಭ್ಯ ಲಭ್ಯವಿದ್ದು, ಬೆಂಗಳೂರು ಹೊರತು ಪಡಿಸಿದರೆ ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಸೌಲಭ್ಯ ಲಭ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪ್ರತಿಯೊಬ್ಬರಿಗೂ ಉತ್ತಮವಾದ ವೈದ್ಯಕೀಯ ಮತ್ತು ಅತ್ಯಾಧುನಿಕ ರೋಗನಿರ್ಣಯ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅತ್ಯಾಧುನಿಕ ಸ್ಪೈರಲ್ ಎಂಟರೊಸ್ಕೋಪಿ ಸೌಲಭ್ಯವನ್ನು ಪ್ರಾರಂಭಿಸಲಾಗಿದ್ದು, ಸಣ್ಣ ಕರುಳಿನ ಅಸ್ವಸ್ಥತೆಗಳನ್ನು ಗುರುತಿಸಲು ಮತ್ತು ಚಿಕಿತ್ಸೆ ನೀಡಲು ಅತ್ಯಂತ ಪರಿಣಾಮಕಾರಿಯಾದ ವಿಧಾನವಾಗಿದೆ ಎಂದರು.
ಪದೇ ಪದೇ ವಾಂತಿಯಾಗುವುದು, ರಕ್ತಹೀನತೆ, ಹೊಟ್ಟೆನೋವು, ಬೇಧಿಯಂತಹ ಲಕ್ಷಣಗಳಿದ್ದರೆ ಇದು ಸಣ್ಣ ಕರುಳಿನಲ್ಲಿ ಉಂಟಾಗಿರುವ ಸಮಸ್ಯೆಯಾಗಿದೆ. ಸ್ಪೈರಲ್ ಎಂಟರೊಸ್ಕೋಪಿ ಮೂಲಕ ಸಣ್ಣ ಕರುಳಿನಲ್ಲಿ ಉಂಟಾಗುವ ರಕ್ತಸ್ರಾವವನ್ನು ಗುರುತಿಸಬಹುದು ಮತ್ತು ಅದನ್ನು ಶಸ್ತ್ರ ಚಿಕಿತ್ಸೆಯಿಲ್ಲದೆ ವಾಸಿ ಮಾಡಬಹುದಾಗಿದೆ ಎಂದರು.
ಸಣ್ಣ ಕರುಳಿನ ಸಮಸ್ಯೆಗಳನ್ನು ಗುರುತಿಸುವುದು ಕಷ್ಟ. ಸ್ಪೈರಲ್ ಎಂಟರೊಸ್ಕೋಪಿಯಿಂದ ಅದು ಸುಲಭವಾಗಿದೆ. ಈ ನಿಟ್ಟಿನಲ್ಲಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಮುಂದಾಗುತ್ತಿದೆ. ಈ ಚಿಕಿತ್ಸೆಗೆ 40ರಿಂದ 45 ಸಾವಿರ ಖರ್ಚಾಗಬಹುದು ಸುಮಾರು 40 ನಿಮಿಷದಿಂದ ಒಂದು ಗಂಟೆಯ ಚಿಕಿತ್ಸೆ ಇದಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಕೆ.ಬಿ.ಕಾಮತ್ ಉಪಸ್ಥಿತರಿದ್ದರು