Thursday, October 10, 2024

ಪ್ರಾಯೋಗಿಕ ಆವೃತ್ತಿ

ಹೈಟೆಕ್ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿದ ಸಚಿವ ನಾರಾಯಣಗೌಡ

ಕೆ.ಆರ್.ಪೇಟೆ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ 14.24 ಕೋಟಿ ವೆಚ್ಚದ ಹೈಟೆಕ್ ತಾಲೂಕು ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಇಂದು ವೀಕ್ಷಿಸಿದರು .

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 14.24 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುತ್ತಿದ್ದು, ಇಂದು ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರು ಸ್ಥಳಕ್ಕೆ ಭೇಟಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸ್ವಿಮ್ಮಿಂಗ್‌ಪೂಲ್, ಬ್ಯಾಡ್ಮಿಂಟನ್ ಕೋರ್ಟ್, ಹೈಟೆಕ್ ಜಿಮ್, ಕ್ಲಬ್ ಹೌಸ್ ಸೇರಿದಂತೆ ವಿಸ್ತಾರವಾದ ಪಾರ್ಕಿಂಗ್ ವ್ಯವಸ್ಥೆ ಒಳಗೊಂಡಿರಲಿದೆ.

ಈ ವೆಚ್ಚದಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ತಾಲೂಕು ಕ್ರೀಡಾಂಗಣದ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಗುಣಮಟ್ಟ ಉತ್ತಮವಾಗಿದ್ದು, ಇದೇ ರೀತಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇ‌ನೆ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದೇನೆ. ಶಂಕುಸ್ಥಾಪನೆ ನಡೆದ ಒಂದು ತಿಂಗಳ ಅವಧಿಯಲ್ಲೇ ಸಾಕಷ್ಟು ಕಾಮಗಾರಿ ನಡೆದಿದೆ. ಐದಾರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಇದನ್ನೂ ಓದಿ : ಬಡವರು ಮತ್ತು ಮಹಿಳೆಯರಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಅಪರೂಪದ ವ್ಯಕ್ತಿ‌ ಡಾ: ಬಿ.ಆರ್. ಅಂಬೇಡ್ಕರ್ : ಸಚಿವ ಡಾ. ಕೆ. ಸಿ ನಾರಾಯಣಗೌಡ

Related Articles

ಅತ್ಯಂತ ಜನಪ್ರಿಯ

error: Content is protected !!