Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾರಾಯಣಗುರು-ನುಲಿಯ ಚಂದಯ್ಯ ಜಯಂತಿ ಅಚರಣೆ

ಮಂಡ್ಯ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.31 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.16 ರಂದು ನುಲಿಯ ಚಂದಯ್ಯ ಜಯಂತಿಯನ್ನು ಅಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ವ್ಯವಸ್ಥಿತವಾಗಿ ಆಚರಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ನುಲಿಯ ಚಂದಯ್ಯ ಅವರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ರಹ್ಮ ಶ್ರೀ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರ ಸಾಮಾಜಿಕ ಕೆಲಸಗಳು ಸಮಾಜಕ್ಕೆ ಮಾದರಿಯಾಗಿವೆ. ಇವರುಗಳ ತತ್ವ ಆದರ್ಶಗಳು ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆಹ್ವಾನ ನೀಡಿ,  ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರುಗಳ ಬಗ್ಗೆ ಮಾತನಾಡುವ ಗಣ್ಯ ವ್ಯಕ್ತಿಯನ್ನು ಕರೆಸಿ, ಬ್ರಹ್ಮಶ್ರೀ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರ ಚಿಂತನೆಗಳು ಹಾಗೂ ಹೋರಾಟಗಳ ಸಾಕ್ಷ್ಯ ಚಿತ್ರಗಳನ್ನು ತಯಾರಿಸಿ ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ನಗರಸಭೆ ಸದಸ್ಯ ಅರುಣ್ ಕುಮಾರ್, ಆರೋಗ್ಯ ಇಲಾಖೆಯ ಡಾ.ಅನಿಲ್ ಕುಮಾರ್ ಮುಖಂಡರಾದ ಅಪ್ಪಾಜಿಗೌಡ, ರಾಜಕುಮಾರ್, ಕೃಷ್ಣ ಕುಮಾರ್,ಕೆ.ವಿ ನಾಗರಾಜು, ನಾಗರತ್ನ, ಕಿರಣ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!