ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 23.86 ಕೋಟಿ ರೂ.ಗಳ ಮೊತ್ತದ ಕೂಲಿಯನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
ಅಕುಶಲ ಕೆಲಸ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಕೂಲಿಕಾರರಿಗೆ ಮಾರ್ಗಸೂಚಿ ಅನ್ವಯ 15 ದಿನದೊಳಗಾಗಿ ಕೆಲಸವನ್ನು ಒದಗಿಸಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಕ್ರಮವಹಿಸುತ್ತಿದ್ದು, ಕಾರ್ಯ ನಿರ್ವಾಹಕ ಅಧಿಕಾರಿಗಳು ಮೇಲುಸ್ತುವಾರಿ ಮಾಡುತ್ತಿದ್ದಾರೆ.
ಯೋಜನೆಯಡಿ ಕಾರ್ಯನಿರ್ವಹಿಸಿದ ಕಾಯಕ ಬಂಧುಗಳಿಗೆ ನೀಡಬೇಕಾದಂತಹ ಪ್ರೋತ್ಸಾಹ ಧನವನ್ನು ಪಾವತಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಮವಹಿಸಲಾಗಿದೆ.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಮಂಡ್ಯ ಜಿಲ್ಲಾ ಸಮಿತಿ ಇವರು ಯೋಜನೆಯ ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಕೂಲಿಕಾರರಿಗೆ ಆನ್‍ಲೈನ್ ಹಾಜರಾತಿಯನ್ನು ರದ್ದು ಪಡಿಸುವಂತೆ ಮನವಿ ಮಾಡಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಅವರು ಸ್ಪಷ್ಟಿಕರಣ ನೀಡಿದ್ದಾರೆ.




