Thursday, September 19, 2024

ಪ್ರಾಯೋಗಿಕ ಆವೃತ್ತಿ

ನರೇಗಾ ಯೋಜನೆಯಡಿ ಕಾಮಗಾರಿ ಪೂರ್ಣಗೊಳಿಸಲು ಸಿಇಓ ಸೂಚನೆ

ದುಡಿಯುವ ಕೈಗಳಿಗೆ ಕೆಲಸ ನೀಡುವ ಕೇಂದ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ 100 ದಿನ ಉದ್ಯೋಗ ನೀಡಬೇಕು ಎಂದು ಜಿ.ಪಂ. ಸಿಇಓ ಶಾಂತ ಎಲ್. ಹುಲ್ಮನಿ  ಪಿಡಿಒಗಳಿಗೆ ಸೂಚನೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೆಲಸ ನೀಡುವ ಮೂಲಕ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು, ರೈತರು ಉದ್ಯೋಗ ಅರಸಿ ಬರುವ ಎಲ್ಲರಿಗೂ ನರೇಗಾ ಅಡಿಯಲ್ಲಿ ಸ್ಥಳೀಯವಾಗಿಯೇ ಕೆಲಸ ನೀಡಿ, ನರೇಗಾ ಕೆಲಸಕ್ಕೆ ಗ್ರಾಮೀಣ ಭಾಗದಲ್ಲಿ ಯಾರೇ ಕೆಲಸ ಕೇಳಿದ 15 ದಿನದೊಳಗೆ ಕೆಲಸ ನೀಡಲು ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಾಡಿದ ಕೆಲಸಕ್ಕೆ ನಿಗದಿತ ಸಮಯದೊಳಗೆ ಕೂಲಿ ಹಣವನ್ನು ನೀಡಬೇಕು ಎಂದು ಸೂಚಿಸಿದರು.

ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸೂಕ್ತ ರೀತಿಯಲ್ಲಿ ಅನುದಾನ ಬಳಕೆ ಮಾಡಿಕೊಂಡು, ಗ್ರಾಮದಲ್ಲಿ ಮೂಲಸೌಲಭ್ಯ ಕಲ್ಪಿಸುವುದರ ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇನ್ನೂ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಎರಡು ಆಟದ ಮೈದಾನ ಕಾಮಗಾರಿಗಳನ್ನು ಮಾಡಿ, ಅವುಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚಿಸಿದರು.

ಇದೇ ವೇಳೆ ಮಾತನಾಡಿದ ತಾಲ್ಲೂಕು ನೋಡಲ್ ಅಧಿಕಾರಿಗಳಾದ ರಂಗೇಗೌಡ, ಅಮೃತ ಗ್ರಾಮ ಪಂಚಾಯತಿ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆ,  15 ನೇ ಹಣಕಾಸು, ಕುಡಿಯುವ ನೀರಿನ ಬಗ್ಗೆ ಮತ್ತು ಎಸ್ಕ್ರೋ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ, ಸಹಾಯಕ ನಿರ್ದೇಶಕ ದೀಪು, ಎಲ್ಲಾ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಎಲ್ಲಾ ಪಿಡಿಓಗಳು, ಎಂಐಎಸ್ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಂತ್ರಿಕ ಸಿಬ್ಬಂದಿಗಳು ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!