ಮಂಡ್ಯ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಅ.24 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಡ್ಯ ನಗರದ ಪ್ರವಾಸಿ ಮಂದಿರದ ಬಳಿಯಿಂದ ಪಕ್ಷದ ಕಾರ್ಯಕರ್ತರು ಸಹಕಾರಿ ಬಂಧುಗಳು ಸೇರಿ ನಂತರ ಡಿಸಿಸಿ ಬ್ಯಾಂಕಿಗೆ ತೆರಳಿ ಅರ್ಜಿ ಸಲ್ಲಿಸಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಳವಳ್ಳಿ ತಾಲ್ಲೂಕಿನ ಸಹಕಾರಿ ಸಂಘಗಳ ಪ್ರತಿನಿಧಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.




