Friday, September 20, 2024

ಪ್ರಾಯೋಗಿಕ ಆವೃತ್ತಿ

ಹಳ್ಳಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿದರೆ ಅಭಿವೃದ್ದಿ: ನರೇಂದ್ರಸ್ವಾಮಿ

ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಪೂರೈಸಿದರೆ ಗ್ರಾಮಗಳು ಅಭಿವೃದ್ಧಿ ಹೊಂದುತ್ತವೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮ ಇಲಾಖೆ ವತಿಯಿಂದ ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಗಳಿಗೆ ಮೂಲ ಸೌಕರ್ಯಗಳ ಕೊರತೆಯಿದೆ. ಇಲ್ಲಿನ ಜನರಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಕೆಲವೊಂದು ಮೂಲಭೂತ ಸೌಕರ್ಯಗಳನ್ನು ನೀಡಿದರೆ ಗ್ರಾಮಗಳು ಅಭಿವೃದ್ಧಿ ಕಾರಣವಲ್ಲಿ ಯಶಸ್ವಿಯಾಗುತ್ತದೆ. ರಸ್ತೆಯ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಕೂಡ ಗಮನ ಹರಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷ ಚೆನ್ನಿಗಾ ರಾಮು, ದ್ಯಾಪೇಗೌಡ, ಲಿಂಗರಾಜು, ಕುಳ್ಳ ಚೆನ್ನಾಕಂಯ್ಯ, ಶ್ರೀನಿವಾಸ್, ಸುಬ್ಬೆಗೌಡ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!