Thursday, April 18, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ 5 ಗ್ಯಾರಂಟಿ ಜಾರಿಗೊಳಿಸಿ ಕೊಟ್ಟ ಮಾತು ಉಳಿಸಿಕೊಂಡಿದೆ: ನರೇಂದ್ರಸ್ವಾಮಿ

ಕಾಂಗ್ರೆಸ್ ಪಕ್ಷ ಭರವಸೆ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಎಲ್ಲವನ್ನೂ ಜಾರಿಗೆ ತಂದಿದ್ದೇವೆ. ಮಾತಿಗೆ ತಪ್ಪಾದ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾಗಿದೆ, ಯೋಜನೆ ಅನುಷ್ಠಾನದಿಂದ ದೀನ ದಲಿತರು ಹಾಗೂ ಬಡವರು ನೆಮ್ಮದಿಯಿಂದ ಜೀವಿಸುವಂತಾಗಿದೆ ಎಂದು ಹೇಳಿದರು.

ಸುಳ್ಳು ಹೇಳದೇ ಯಾವ ಧರ್ಮವನ್ನು ದುರುಪಯೋಗಪಡಿಸಿಕೊಳ್ಳದೇ ಜನರ ಸೇವೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಸ್ವಾತಂತ್ರ‍್ಯ ನಂತರ ಕಡುಬಡತನದಲ್ಲಿದ್ದ ಭಾರತವನ್ನು ಸಮೃದ್ಧರಾಗಿ ಕಟ್ಟಿದ ಕೀರ್ತಿ ಕಾಂಗ್ರೆಸ್ ಸಲ್ಲುತ್ತದೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಇಂಥ ಕಚೇರಿಗಳನ್ನು ತೆರೆದು ಸರ್ಕಾರ ಯೋಜನೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಮನೋಹರ್ ಅರಸು, ಸದಸ್ಯ ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಹುಸ್ಕೂರು ಎಚ್.ಕೆ.ಕೃಷ್ಣಮೂರ್ತಿ, ಜಿಲ್ಲಾಪಂಚಾಯಿತಿ ಸದಸ್ಯರಾದ ಆರ್.ಎನ್.ವಿಶ್ವಾಸ್, ಚಂದ್ರಕುಮಾರ್, ತಾ.ಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಯುವ ಮುಖಂಡರೋಹಿತ್(ದೀಪು), ಗ್ರಾ.ಪಂ ಮಾಜಿ ಅಧ್ಯಕ್ಷ ಚೊಟ್ಟನಹಳ್ಳಿ ಸಿ.ಪಿ.ರಾಜು, ಶೇಖರ್, ಕುಮಾರಗೌಡ, ರವಿರಾಜ್ ಅರಸು, ಸುರೇಶ್, ಪ್ರದೀಪ್, ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!