Tuesday, May 21, 2024

ಪ್ರಾಯೋಗಿಕ ಆವೃತ್ತಿ

ಮಳೆ ಬರುವವರೆಗೆ ನೀರನ್ನು ಮಿತವಾಗಿ ಬಳಸಿ: ನರೇಂದ್ರಸ್ವಾಮಿ

ಬರಗಾಲ ಎದುರಾಗಿರುವುರಿಂದ ಮಳೆ ಬರುವ ತನಕ ನೀರನ್ನು ಮಿತವಾಗಿ ಬಳಸಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದಲ್ಲಿ ಪೂರಿಗಾಲಿ 95 ಲಕ್ಷರೂ ವೆಚ್ಚದ ಮುಖ್ಯರಸ್ತೆಯಿಂದ ಶ್ರೀ ಕೆಂಡಗಣ್ಣೇಶ್ವರ ದೇವಸ್ಥಾನದ ಮುಂಭಾಗ ರಾವಣಿ ಕೆರೆಯ ಹಿನ್ನೀರಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ದಿ ಕಾಮಗಾರಿ ಹಾಗೂ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಪೂರಿಗಾಲಿಯಲ್ಲಿ 35 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರು ಕಡಿಮೆಯಾಗಿರುವುದರಿಂದ ಪ್ರಸಕ್ತ ವರ್ಷ ನೀರಿನ ಅಭಾವ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ನೀರನ್ನು ವ್ಯಯ ಮಾಡಬಾರದು, ಬರಗಾಲವನ್ನು ಸಮರ್ಪಕವಾಗಿ ಎದುರಿಸುವ ಜವಾಬ್ದಾರಿಯೊಂದಿಗೆ ತಾಲ್ಲೂಕು ಆಡಳಿತ ವತಿಯಿಂದ ಈಗಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಉದ್ಯೋಗಖಾತ್ರಿ ಯೋಜನೆಯಡಿ ಗ್ರಾಮಗಳಿಗೆ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಾಣ ಮಾಡಿಕೊಳ್ಳುವ ಅವಕಾಶವಿದ್ದು, ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಳ್ಳಬೇಕು, ಈಗಾಗಲೇ ತಾ.ಪಂ ಮತ್ತು ಜಿಲ್ಲಾಪಂಚಾಯಿತಿ ಮೇಲಾಧಿಕಾರಿಗಳ ಜೊತೆಗೆ ಮಾತನಾಡಿದ್ದು, ಉದ್ಯೋಗ ಖಾತ್ರಿಯೋಜನೆಯಡಿಯಲ್ಲಿ ಗ್ರಾಮಕ್ಕೆ ಬೇಕಾದ ಕಾಮಗಾರಿಗಳನ್ನು ಹಮ್ಮಿಕೊಳ್ಳಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ ದೇವರಾಜು, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಆರ್.ಎನ್ ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ವಕೀಲ ಜಗದೀಶ್, ಮುಖಂಡರಾದ ಬಂಕ್‌ಮಹದೇವು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!