Thursday, September 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ನೌಕರರು ಉತ್ತಮ ಮಾನಸಿಕ ಸ್ಥಿತಿ ಕಾಪಾಡಿಕೊಳ್ಳಬೇಕು: ನರೇಂದ್ರಸ್ವಾಮಿ

ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಮಾನಸಿಕ ಸ್ಥಿತಿಯನ್ನು ಉತ್ತಮವಾಗಿ ಇಟ್ಟಿಕೊಳ್ಳಬೇಕು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯೆ ಆಧಾರದ ಮೇಲೆ ಉದ್ಯೋಗವನ್ನು ಪಡೆದು ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಮಾನಸಿಕ ಸ್ಥಿತಿಗತಿಯನ್ನು ಉತ್ತಮವಾಗಿ ಇಟ್ಟಿಕೊಳ್ಳಬೇಕು, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದ್ದು, ಪ್ರತಿನಿತ್ಯ ಅಭ್ಯಾಸ ಮಾಡುವುದರ ಮೂಲಕ ಕ್ರೀಡೆಯಲ್ಲಿ ಸಾಧಕರಾಗುವುದರ ಜೊತೆಗೆ ಆರೋಗ್ಯವನ್ನು ವೃದ್ದಿಸಿಕೊಳ್ಳಬೇಕೆಂದು ತಿಳಿಸಿದರು.

ಶಿಕ್ಷಣ, ಕೃಷಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಜವಾಬ್ದಾರಿಯಲ್ಲಿ ಪರಿಣಿತರಾಗಿ ನಿಸ್ವಾರ್ಥ ವಾಗಿ ಸೇವೆ ಸಲ್ಲಿಸಿದರೇ ನಾಡು ಸಂಮೃದ್ದಿಯಾಗಲು ಸರ್ಕಾರಿ ನೌಕರರು ಪ್ರಮುಖ ಕಾರಣಕರ್ತರಾಗುತ್ತಾರೆ, ಸರ್ಕಾರಿ ನೌರರು ಕ್ರೀಡೆ ಜೊತೆಗೆ ಸಾಂಸ್ಕೃತಿಕ ಚಟುಚಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದರ ಮೂಲಕ ತಾಲ್ಲೂಕಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.

ಸರ್ಕಾರಿ ನೌಕರರು ಆರೋಗ್ಯವಾಗಿದ್ದರೇ ಇಲಾಖೆಗಳಲ್ಲಿನ ಕೆಲಸಗಳು ಚನ್ನಾಗಿ ನಡೆಯುತ್ತವೆ, ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದರೇ ಉತ್ತಮ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತದೆ, ಈ ದಿಸೆಯಲ್ಲಿ ಸರ್ಕಾರಿ ನೌಕರರು ದೈಹಿಕವಾಗಿ ಸದೃಢ ದೇಹದಾಢ್ಯವನ್ನು ಇಟ್ಟಿಕೊಳ್ಳುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಶಾಸಕ ಪಿ.ಎಂ ನರೇಂದ್ರಸ್ವಾಮಿ ಪರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಲೊಕೇಶ್,ಡಿವೈಎಸ್‌ಪಿ ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪುರಸಭೆ ಮುಖ್ಯಾಧಿಕಾರಿ ನಾಗರತ್ನಮ್ಮ, ಪುರಸಭೆ ಸದಸ್ಯ ನೂರುಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಕಾರ್ಯಧ್ಯಕ್ಷ ಶಿವಮಾದೇಗೌಡ, ಕ್ಷೇತ್ರ ಸಮಾನ್ವಯಾಧಿಕಾರಿ ಶ್ರೀನಿವಾಸ್, ಮುಖಂಡರಾದ ಬಂಕ್‌ಮಹದೇವು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!