Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಮಹಿಳೆಯರು ಆರ್ಥಿಕವಾಗಿ ಸಧೃಡರಾಗಬೇಕು- ನರೇಂದ್ರಸ್ವಾಮಿ

ಮಹಿಳೆಯರು ಅಥಿ೯ಕವಾಗಿ ಸಧೃಡರಾಗುವುದರ ಮೂಲಕ ಫಲಾನುಭವಿಗಳು ಸ್ವಾಭಿಮಾನದ ಬದುಕು ಕಟ್ಟಿಕೊಂಡು ಉತ್ತಮ ಜೀವನ ನಡೆಸಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಸಲಹೆ ನೀಡಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಖಾದಿ ಗ್ರಾಮೋದ್ಯೋಗ ಮಂಡಳಿ ವತಿಯಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಅವರು, ವೃತ್ತಿಗಳ ಆಧಾರದ ಮೇಲೆ ಸಕಾ೯ರದ ಸವಲತ್ತುಗಳನ್ನು ಪಡೆಯಬಹುದಾಗಿದೆ. ತಾಲ್ಲೂಕಿನಲ್ಲಿ ಪ್ರಸ್ತುತ 88 ಮಂದಿಗೆ ಹೊಲಿಗೆ ಯಂತ್ರ 15 ಮಂದಿಗೆ ಕ್ಷೌರಿಕ ಕಿಟ್ ಗಳು ಹಾಗೂ ವಿಶ್ವಕಮ೯ ಕುಶಲಕಮಿ೯ಗಳಿಗೆ ಯಂತ್ರೋಪಕರಣಗಳ ಕಿಟ್ ಗಳನ್ನು ವಿತರಿಸಲಾಗುತ್ತಿದ್ದು, ಇವುಗಳನ್ನುನಸದುಪಯೋಗಪಡಿಸಿಕೊಂಡು ಫಲಾನುಭವಿಗಳು ಸ್ವಾಭಿಮಾನದ ಬದಕು ಕಟ್ಟಿಕೊಂಡು ಉತ್ತಮ ಜೀವನ ನಡೆಸಬೇಕೆಂದರು.

ಜಾಹೀರಾತು

ಕೆಳ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್‌ ಸಕಾ೯ರ ಬದ್ದವಾಗಿದ್ದು,ಅಂತಹ ಕುಟುಂಬಗಳ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಅನುದಾನವನ್ನು ಮೀಸಲಿಡಲಾಗಿದೆ. ರಾಜ್ಯ ಸಕಾ೯ರಗಳ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಕೇಂದ್ರ ಸಕಾ೯ರ ನಮ್ಮ ಕಾಂಗ್ರೆಸ್ ಸಕಾ೯ರದ ಯೋಜನೆಗಳನ್ನು ನಕಲು ಮಾಡಿಕೊಂಡು ಲೋಕಸಭಾ ಚುನಾವಣೆ ಗೆಲ್ಲಲು ಹೊರಟಿದ್ದಾರೆಂದು ವ್ಯಂಗ್ಯವಾಡಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಎನ್ ಲೊಕೇಶ್ , ತಾ.ಪಂ ಇಓ ಅಧಿಕಾರಿ ಎಲ್ ಮಮತ, ಡಿವೈಎಸ್ಪಿ ವಿ ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಚಂದ್ರಪಾಟೀಲ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!