Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ಬದ್ದ: ನರೇಂದ್ರಸ್ವಾಮಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ನೀಡಿದ್ದ ಭರವಸೆಗಳನ್ನು ಈಡೇರಿಸಲು ಬದ್ದನಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೆನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು.

ಮಳವಳ್ಳಿ ತಾಲೂಕಿನ ಕಸಬಾ ಹೋಬಳಿಯ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ. ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮತ್ತು ಧನಗೂರು ಗ್ರಾಮದಲ್ಲಿ ನೂತನ ಎಂ.ಯು.ಎಸ್.ಎಸ್. ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಸೇರಿದಂತೆ ಸುಮಾರು 8.50 ಕೋಟಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಕಸಬಾ ಹೋಬಳಿಯ ಯತ್ತಂಬಾಡಿ, ಹುಲ್ಲಹಳ್ಳಿ, ಹುಲ್ಲಾಗಾಲ, ದಡಮಹಳ್ಳಿ, ಬಾಣಸಮುದ್ರ, ಕೋಡಿಪುರ ಸೇರಿದಂತೆ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನಡೆಸಿದ್ದು, ಈಗಾಗಲೇ ಇನ್ನೂ ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಲೋಕಸಭಾ ಚುನಾವಣೆಯ ನಂತರ ಕಾಮಗಾರಿ ಆರಂಭಿಸುವುದಾಗಿ ಅವರು ಭರವಸೆ ನೀಡಿದರು.

ಬಾಣಸಮುದ್ರ ಗೇಟ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಕೋರಿಕೆ ನಿಲುಗಡೆ ಇದ್ದು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲ ಆಗುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಬಸ್ಸುಗಳು ನಿಲ್ಲಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.
ಇದೇ ವೇಳೆಯಲ್ಲಿ ಮೇಗಳಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಅಂಗನವಾಡಿಯನ್ನು ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಮುಖಂಡರಾದ ಆರ್.ಎನ್.ವಿಶ್ವಾಸ್, ಶಿವ ಮಾದೇಗೌಡ ,ಹೆಚ್.ಕೆ ಕೃಷ್ಣ ಮೂರ್ತಿ, ಚಂದ್ರಕುಮಾರ್, ಎಂ.ಶಿವಕುಮಾರ್, ಕೆ.ಎಸ್.ದ್ಯಾಪೇಗೌಡ, ಸಿ.ಪಿ.ರಾಜು, ಅಂಬರೀಶ್, ರೋಹಿತ್, ಚಿಕ್ಕಸ್ವಾಮಿ,ಸಿದ್ದಯ್ಯ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ