Thursday, November 19, 2026

ಪ್ರಾಯೋಗಿಕ ಆವೃತ್ತಿ

ತಳ ಸಮುದಾಯಗಳ ಪ್ರಗತಿಗಾಗಿ ಸ್ಟಾರ್ ಚಂದ್ರು ಬೆಂಬಲಿಸಿ: ನರೇಂದ್ರಸ್ವಾಮಿ

ತಳ ಸಮುದಾಯಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಹಲವಾರು ಯೋಜನೆಗಳನ್ನು ತಂದಿದೆ. ಎಲ್ಲ ವರ್ಗದವರನ್ನು ಒಗ್ಗಟ್ಟಿನಿಂದ ಕರೆದೊಯ್ಯುವ ಪಕ್ಷ ಕಾಂಗ್ರೆಸ್ ಆಗಿದೆ. ಹೀಗಾಗಿ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಬೇಕು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಂಡ್ಯ ತಾಲ್ಲೂಕಿನ ವಿವಿಧ ಮಠಗಳಿಗೆ ಭೇಟಿ ನೀಡಿ ಅಶೀರ್ವಾದ ಪಡೆದ ಸಂದರ್ಭದಲ್ಲಿ ಬಿ.ಜಿ.ಪುರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎದುರಾಳಿಯನ್ನು ಛೇಡಿಸುವುದು ಮತ್ತು ಟೀಕೆ ಮಾಡುವುಕ್ಕೆ ಹೋಗುವುದಿಲ್ಲ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದರು.

ಬರಗಾಲದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ನೆಮ್ಮದಿಯ ಬದುಕು ಸಾಧಿಸುತ್ತಿರುವ ಗ್ರಾಮೀಣ ಜನರು ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯುತ್ತಾರೆಂಬ ನಂಬಿಕೆ ಇದೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಕೊಟ್ಟ ಮತಕ್ಕಿಂತಲೂ ಇನ್ನೂ ಹೆಚ್ಚಿನ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾಮಣೇಗೌಡ ಅವರನ್ನು ಗೆಲ್ಲಿಸಬೇಕೆಂದು ಕೋರಿದರು.

ಆತ್ಮಸಾಕ್ಷಿ ಒಪ್ಪದ್ದೇ ವಿರೋಧಿಸಿದ್ದೆ

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಎರಡು ಪಕ್ಷಗಳೊಂದಿಗೆ ಉಪ ಸಭಾಪತಿಯಾಗಿ ಗೌರವಯುತ ಸ್ಥಾನಕ್ಕೆ ನ್ಯಾಯ ಒದಗಿಸಿದ್ದೇನೆ, ಉಪ ಸಭಾಪತಿ ಮಾಡಿದ್ದಾರೆ ಎಂದಾಕ್ಷಣ ಅವರು ಮಾಡಿಕೊಂಡ ತೀರ್ಮಾನಗಳನ್ನು ಒಪ್ಪಿಕೊಳ್ಳಲು ನಾವು ಸಿದ್ದರಿಲ್ಲ, ರೈತ ವಿರೋಧಿ ಕಾಯ್ದೆಗೆ ಮತ ಕೊಡಲು ನನ್ನ ಆತ್ಮಸಕ್ಷಿ ಒಪ್ಪದ್ದೇ ವಿರೋಧಿಸಿದೆ, ನಾನು ರೈತ ಮಗನಾಗಿದ್ದು, ನಾಲ್ಕು ಭಾರಿ ಶಾಸಕನ್ನಾಗಿ ಸೇವೆ ಸಲ್ಲಿಸಿದ್ದೇನೆ, ನನ್ನಲ್ಲಿ ಪ್ರಜ್ಞೆ ಇದೆ, ವಿಚಾರವಂತಿಕೆ ಇದೆ, ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಜಿ.ಪಂ.ಸದಸ್ಯ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ತಾ.ಪಂ.ಮಾಜಿ ಅಧ್ಯಕ್ಷ ಕುಂದೂರು ಪ್ರಕಾಶ್, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಎಸ್.ದ್ಯಾಪೇಗೌಡ, ಮುಖಂಡರಾದ ಬಂಕ್ ಮಹದೇವು, ಮುಖಂಡರಾದ ಮಹೇಶ್, ಅನಿಲ್ ಕುಮಾರ್, ಅಮೃತ್ ಶ್ರೀಕಂಠು, ಪ್ರಭುಸ್ವಾಮಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ