ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು ಸಹಕಾರ ಸಂಘಗಳಿಂದ ಸಾಲ ಪಡೆದು ರೈತರು ಆರ್ಥಿಕ ಚಟುವಟಿಕೆಗಳಲ್ಲಿ ಬಳಸಿಕೊಂಡು ರೈತರು ಆರ್ಥಿಕತೆಯಲ್ಲಿ ಸಬಲೀಕರಣ ಆಗಬೇಕೆಂದು ತಿಳಿಸಿದರು.
ಮಳವಳ್ಳಿ ತಾಲೂಕಿನ ಕಂದೇಗಾಲ ಗ್ರಾಮದ ಸಮೀಪದ ಮತ್ತಿತಾಳೇಶ್ವರ ದೇವಸ್ಥಾನದ ಆವರಣದಲ್ಲಿ ಕಂದೇಗಾಲ ವಿವಿಧೋದ್ದೇಶ ಸಹಕಾರ ಸಂಘದಿಂದ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಸಹಕಾರ ಇಲಾಖೆ ಮೂಲಕ ರೈತರ ಸಬಲೀಕರಣಕ್ಕಾಗಿ ಕೋಟ್ಯಾಂತರ ವೆಚ್ಚ ಮಾಡುತ್ತಿದ್ದು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ರೈತರಿಗೆ ಸಹಕಾರ ಸಂಘಗಳ ಮೂಲಕ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲಾಗಿದೆ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಸಹಕಾರ ಸಂಘಗಳ ಸಾಲ ಮನ್ನಾ ಸಿದ್ದರಾಮಯ್ಯ ಅವರು ಮಾಡಿದರು. ರಾಜ್ಯದಲ್ಲಿ ಹಾಲು ಉತ್ಪನ್ನ ಹೆಚ್ಚಾದಾಗ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಕ್ಷೀರ ಭಾಗ್ಯ ಯೋಜನೆಯ ಮೂಲಕ ಶಾಲಾ ಮಕ್ಕಳಿಗೆ ಹಾಲಿನ ಭಾಗ್ಯ ನೀಡಿದರು ಎಂದು ತಿಳಿಸಿದರು.
ದೇಶದ ಪ್ರತಿಯೊಂದು ಕ್ಷೇತ್ರದಲ್ಲಿ ಸಹಕಾರ ಸಂಘ ತಲುಪಿದೆ. ಸಹಕಾರ ಸಂಘಗಳಲ್ಲಿ ಸಾಲ ಪಡೆದು ಮಹಿಳೆಯರು ಉತ್ತಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ಸಹಕಾರವಾಗಿದೆ ಎಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ. ಟಿ ಎ ಪಿ ಸಿ ಎಂ ಸಿ ನಿರ್ದೇಶಕರಾದ ಲಿಂಗರಾಜು.ದ್ಯಾಪೇಗೌಡ ಸವಿತಾ. ಕುಳ್ಳ ಚನ್ನಕಯ್ಯ. ಚೌಡಯ್ಯ. ಪ್ರಕಾಶ್. ಮನ್ ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ ಮನಮುಲ್ ನಾಮನಿರ್ದೇಶಕ ಆರ್ ಎಂ ವಿಶ್ವಾಸ್. ಗ್ರಾಮ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ. ಕಂದೇಗಾಲ ಸಹಕಾರ ಸಂಘದ ಅಧ್ಯಕ್ಷ ನಾಗರಾಜು. ನಾಗಭೂಷಣ್ ಅನಿತಾ. ಪುರುಷೋತ್ತಮ್ ಸೇರಿದಂತೆ ಇತರರು ಇದ್ದರು




