Friday, November 20, 2026

ಪ್ರಾಯೋಗಿಕ ಆವೃತ್ತಿ

ಶಿಕ್ಷಕರು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಮರ್ಥವಾಗಿ ಸಿದ್ದಗೊಳಿಸಬೇಕು ; ನರೇಂದ್ರಸ್ವಾಮಿ

ರಾಷ್ಟ್ರ ನಿರ್ಮಾಣ ಕಾರ‍್ಯದಲ್ಲಿ ಶಿಕ್ಷಕರ ಸಮುದಾಯದ ಜವಾಬ್ದಾರಿಯಾಗಿದ್ದು ಅವರನ್ನು ಗೌರವಯುತವಾಗಿ ನಡೆಸಿ ಕೊಳ್ಳುವುದರ ಜೊತೆಗೆ ಸದಾ ಋುಣಿಯಾಗಿದ್ದೇನೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ಅಭಿಪ್ರಾಯಪಟ್ಟರು.

ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಸ್ಪೂರ್ತಿ ಸಿಂಚನ ಕಾರ್ಯಕ್ರಮದ ಅಡಿಯಲ್ಲಿ ತಾಲೂಕಿನ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರಿಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ಮತ್ತು ಒತ್ತಡ ನಿರ್ವಹಣೆ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈವಿಧ್ಯಮಯ ಕಲಿಕಾ ಸಾಮರ್ಥ್ಯದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಗೊಳಿಸುವ ಸವಾಲನ್ನು ಶಿಕ್ಷಕರು ಸಮರ್ಥವಾಗಿ ನಿರ್ವಹಿಸಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಉತ್ತಮಪಡಿಸುವುದರ ಜತಗೆ ಫಲಿತಾಂಶವನ್ನೂ ಸುಧಾರಿಸಬಹುದು ಎಂದರು.

ಗ್ರಾಮೀಣ ಮಕ್ಕಳಿಗೆ ಮುನ್ನುಡಿ ಬರೆಯಲು ಶಿಕ್ಷಕರು ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಗ್ರಾಮೀಣಮಟ್ಟದ ಶಿಕ್ಷಣವನ್ನು ಸುಧಾರಣೆ ತರಬೇಕೆಂದು ಸಲಹೆ ನೀಡಿದರು.

ಪ್ರಾಧ್ಯಾಪಕ ಮತ್ತು ಮನೋಶಾಸ್ತ್ರಜ್ಞ ಡಾ. ರವೀಶ್ ಮಾತನಾಡಿ, ಶಿಕ್ಷಕರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಉತ್ತಮ ಫಲಿತಾಂಶವನ್ನು ಕೊಡಬಹುದು. ಮಕ್ಕಳಿಗೆ ಫಲಿತಾಂಶದ ಜೊತೆಗೆ ಜೀವನದ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಬೇಕು. ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಪಾತ್ರ ವಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಂಟಿ ನಿರ್ದೇಶಕ ಸುರೇಶ್ ಕುಮಾರ್. ಬಿಇಒ ಉಮಾ. ಡಿ ವೈ ಎಸ್ ಪಿ ಕೃಷ್ಣಪ್ಪ. ಸಮಾಜ ಕಲ್ಯಾಣ ಅಧಿಕಾರಿ ಸಂತೋಷ್ ಕುಮಾರ್, ಅನ್ನದಾಸೋಹ ಅಧಿಕಾರಿ ಮಹಾದೇವಯ್ಯ, ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ