Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ -ಕಿರುಗಾವಲು ರಸ್ತೆ ಅಪಘಾತ ರಹಿತ ವಲಯ : ನರೇಂದ್ರಸ್ವಾಮಿ

ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಸಂತೆ ಮೈದಾನದ ಮಳವಳ್ಳಿ ಮೈಸೂರು ಮುಖ್ಯರಸ್ತೆಯನ್ನು ಅಪಘಾತ ರಹಿತ ವಲಯನ್ನಾಗಿ ಮಾಡುವುದರ ಜೊತೆಗೆ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಸಂತೆ ಮೈದಾನದಲ್ಲಿ ಕೊರಟೆಗೆರೆ ಬಾವಲಿ ರಸ್ತೆ ಸುರಕ್ಷತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದ ಅವರು, ಅಪಘಾತ ವಲಯವನ್ನು ಗುರುತಿಸಿ ಚತುಷ್ಟದ
ತಾಲ್ಲೂಕಿನ ಹುಸ್ಕೂರು ಹಾಗೂ ಅಗಸನಪುರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಘನತಾಜ್ಯ ನಿರ್ಮಿಸಿರುವ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಉದ್ಘಾಟಿಸಲಾಗಿದೆ.

ಕೆಶಿಪ್ ವತಿಯಿಮದ ಅಪಘಾತ ವಲಯಗಳನ್ನು ಗುರುತಿಸಿ ವಿಶೇಷವಾಗಿ ಸೌಂದರ್ಯೀಕರಣದ ಜೊತೆಗೆ ಪುಟ್‌ಪಾತ್ ಸಮೇತವಾಗಿ ರಸ್ತೆಯನ್ನು ಅಭಿವೃದ್ದಿಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಲಾಗಿದೆ. ತಾಲ್ಲೂಕಿನಲ್ಲಿಯೇ ಅತ್ಯಂತ ಪ್ರಖ್ಯಾತಿ ಹೊಂದಿರುವ ಕಿರುಗಾವಲು ಸಂತೆ ಮಾಳವನ್ನು ಸಮಗ್ರವನ್ನು ಅಭಿವೃದ್ದಿಗೊಳಿಸಲು ಕ್ರಮ ಕೈಗೊಳ್ಳುವುದರ ಮೂಲಕ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲಾಗಿದೆ.
ಕಿರುಗಾವಲು ಸಂತೆ ಮೈದಾನವನ್ನು ತಂಗುದಾನದ ಜೊತೆಗೆ ಯಾವುದೇ ರೀತಿಯ ಸಂಚಾರಕ್ಕೆ ಅಡಚಣೆಯಾಗದಂತೆ ರಸ್ತೆಸಂಚಾರವನ್ನು ಸುಗಮಗೊಳಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮನ್‌ಮುಲ್ ನಿರ್ದೇಶಕರಾದ ಕೃಷ್ಣೇಗೌಡ, ಆರ್.ಎನ್ ವಿಶ್ವಾಸ್, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು, ಗ್ರಾಮಪಂಚಾಯಿತಿ ಅಧ್ಯಕ್ಷ ರಾ.ಪಂ.ಅಧ್ಯಕ್ಷೆ ಇನಿಯತ್ ಕಾತೂನ್, ಉಪಾಧ್ಯಕ್ಷ ಮಾದೇಗೌಡ ಮುಖಂಡರಾದ ಕೃಷ್ಣಮೂರ್ತಿ, ಮಹೇಶ್, ಮಸೂದ್, ತಾ.ಪಂ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ಗ್ರಾ,ಪಂ ಸದಸ್ಯರು ಹಾಗೂ ಮುಖಂಡರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ