Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನರೇಂದ್ರಸ್ವಾಮಿ ಹುಟ್ಟುಹಬ್ಬ : ಕಾಂಗ್ರೆಸ್ ಕಾರ್ಯಕರ್ತರಿಂದ ಉಪಹಾರ ವಿತರಣೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್ ಆವರಣದಲ್ಲಿರುವ ಪರಿಸರ ಸಂಸ್ಥೆಯ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಉಪಹಾರ ಹಾಗೂ ಊಟ ವಿತರಣೆ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅವರ ಹುಟ್ಟುಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಅಶೋಕ್ ಮಾತನಾಡಿ, ಮಳವಳ್ಳಿ ವರಪುತ್ರ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಲಭಿಸಲಿ ಎಂದು ಶುಭ ಕೋರಿದರು.

ಮಾಜಿ ಸಚಿವರಾಗಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿರುವ ಅವರಿಗೆ ಮುಂದಿನ ದಿನಗಳಲ್ಲಿ ಉನ್ನತವಾಗಿ ಹೆಚ್ಚಿನ ಕೆಲಸ ಮಾಡಲು ಮಂತ್ರಿ ಆಗಲಿ ಎಂದು ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.

ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯರಾದ ಎಂ.ಎನ್.ಶ್ರೀಧರ್ ಮಾತನಾಡಿ ಒಂದು ಬಾರಿ ಮಂತ್ರಿಯಾಗಿ ಕೆಲಸ ಮಾಡಿರುವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ರಾಜ್ಯದ ಮಂತ್ರಿಯಾಗುವ ಅವಕಾಶ ಸಿಗಲಿ, ದೇವರು ಅವರಿಗೆ ಆಯಸ್ಸು, ಆರೋಗ್ಯ,ಉನ್ನತ ಸ್ಥಾನಮಾನದ ಯಶಸ್ಸು ಲಭಿಸಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಕೆ.ರುದ್ರಪ್ಪ, ಮಹಿಳಾ ಕಾಂಗ್ರೆಸ್ ಮುಖಂಡರಾದ ವೀಣಾ ಶಂಕರ್, ನೀಲಾ, ಕಾಂಗ್ರೆಸ್ ಮುಖಂಡ ಸೋಮಶೇಖರ್, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದ ಮಂಗಲ ಎಂ.ಯೋಗೀಶ್, ದೀಪಕ್, ಹರೀಶ್, ಚನ್ನಪ್ಪ ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ